ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MUDA Scam: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ರಿಲೀಫ್‌; ಇಡಿ ಸಮನ್ಸ್‌ ರದ್ದುಗೊಳಿಸಿದ ಹೈಕೋರ್ಟ್‌

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಶುಕ್ರವಾರ ಹೈಕೋರ್ಟ್ ಆದೇಶ ಹೊರಡಿಸಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ರಿಲೀಫ್‌

ಕರ್ನಾಟಕ ಹೈಕೋರ್ಟ್‌.

Profile Ramesh B Mar 7, 2025 6:13 PM

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ (Muda Scam Case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಪಾರ್ವತಿ (Parvathi) ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ (Byrathi Suresh) ಬಿಗ್‌ ರಿಲೀಫ್‌ ಸಿಕ್ಕಿದೆ. ಇಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ (Karnataka High Court)​ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪಾರ್ವತಿ ಹಾಗೂ ಭೈರತಿ ಸುರೇಶ್​ಗೆ ಇಡಿ ಸಮನ್ಸ್​ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಇಬ್ಬರು ಹೈಕೋರ್ಟ್​ ಮೊರೆ ಹೋಗಿದ್ದರು. ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಇಡಿ ಸಮನ್ಸ್​ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ನ್ಯಾಯಾಲಯವು ಕಳೆದ ತಿಂಗಳು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ವಿಚಾರಣೆ ವೇಳೆ ಪಾರ್ವತಿ ಪರ ಹಿರಿಯ ವಕೀಲ ಸಂದೇಶ್ ಜೆ.ಚೌಟಾ ಹಾಜರಾಗಿದ್ದರು. ʼʼಅಕ್ರಮವಾಗಿ ವಿತರಿಸಲಾಗಿದೆ ಎನ್ನಲಾದ ನಿವೇಶನಗಳನ್ನು ಪಾರ್ವತಿ ಹಿಂದುರಿಗಿಸಿದ್ದಾರೆ. ಅವರು ಯಾವುದೇ ಅಪರಾಧದ ಹಿನ್ನೆಲೆ ಹೊಂದಿಲ್ಲ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ ಕೂಡಲೇ ಆತುರದಲ್ಲಿ ಇಡಿ ತನ್ನ ಇಸಿಐಆರ್ ದಾಖಲಿಸಿದೆʼʼ ಎಂದು ಅವರು ಹೇಳಿದರು.

ಮುಡಾ ಹಗರಣ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮ್ಯಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ ಸೇರಿದಂತೆ ಇತರರಿಗೆ ಇಡಿ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದಕ್ಕೆ ತಡೆ ನೀಡುವಂತೆ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ ಪ್ರತ್ಯೇಕವಾಗಿ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್​ ಇಡಿ ಸಮನ್ಸ್​ ಅನ್ನೇ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನೂ ಓದಿ: MUDA Scam: ಮುಡಾ ಹಗರಣ ಕುರಿತು ಲೋಕಾಯುಕ್ತದಿಂದ ಕೋರ್ಟ್‌ಗೆ 11000 ಪುಟಗಳ ವರದಿ ಸಲ್ಲಿಕೆ

ವಿವಾದಕ್ಕೆ ಕಾರಣವಾದ ಸೈಟ್‌ಗಳನ್ನು ಪಾರ್ವತಿ 2024ರ ಅಕ್ಟೋಬರ್ 1ರಂದು ಹಿಂದಿರುಗಿಸಿದ್ದರು. ಇದೀಗ ಮುಡಾದ 14 ಸೈಟ್‌ಗಳಲ್ಲದೇ 1,708 ಸೈಟ್‌ಗಳ ಬಗ್ಗೆಯೂ ತನಿಖೆ ನಡೆಸುತ್ತಿದೆ. ಈಗಾಗಲೇ 160 ಸೈಟ್‌ಗಳನ್ನು ಇಡಿ ತಾತ್ಕಾಲಿಕ ಜಪ್ತಿ ಮಾಡಿದೆ. ತನ್ನ ಕಾರ್ಯವ್ಯಾಪ್ತಿ ಮೀರಿ ಇಡಿ ಪರ್ಯಾಯ ತನಿಖೆ ನಡೆಸುತ್ತಿದೆ. ಭೂಸ್ವಾಧೀನ, ಭೂಪರಿವರ್ತನೆ ಇತ್ಯಾದಿಗಳ ಬಗ್ಗೆಯೂ ಗಮನ ಹರಿಸಿದೆ. ಲೋಕಾಯುಕ್ತ ಪೊಲೀಸರ ತನಿಖಾ ವ್ಯಾಪ್ತಿಗೆ ಇಡಿ ಪ್ರವೇಶಿಸಿದೆ. ಮುಡಾಗೆ ಹಿಂತಿರುಗಿಸಿರುವ 14 ಸೈಟ್​ಗಳನ್ನು ಇಡಿ ಇನ್ನೂ ಜಪ್ತಿ ಮಾಡಿಲ್ಲ. ಆದರೆ ಇತರ 160 ಸೈಟ್‌ಗಳನ್ನು ಇಡಿ ಜಪ್ತಿ ಮಾಡಿದೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಫೆ. 20ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸ್ ಟಿ.ಉದೇಶ ಅವರು ದಾಖಲೆಗಳೂ ಸೇರಿದಂತೆ ಒಟ್ಟು 11 ಸಾವಿರ ಪುಟಗಳ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಿದ್ದರು. ಈ ವರದಿಯಲ್ಲಿ, ತನಿಖೆಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಲೋಕಾಯುಕ್ತ ಪೊಲೀಸರೂ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು.