ಬೆಂಗಳೂರು, ಫೆ.06 : ಪ್ರೇಯಸಿಯ ಜೊತೆಗಿನ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ (blackmale) ಮಾಡಿದ ಯುವಕನಿಗೆ (lover) ಕರ್ನಾಟಕ ಹೈಕೋರ್ಟ್ (Karnataka high court) ಜಾಮೀನು ನಿರಾಕರಿಸಿದೆ. ನಿಜವಾದ ಪ್ರೇಮಿಯು ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ದೃಶ್ಯಗಳನ್ನು ಸೆರೆಹಿಡಿಯುವುದಿಲ್ಲ. ಅಲ್ಲದೆ, ಅಂತಹ ಪೋಟೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಬಲವಂತಪಡಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಪ್ರಿಯಕರನೊಬ್ಬ ತನ್ನ ಪ್ರೇಯಸಿಯೊಂದಿಗಿನ ಖಾಸಗಿ ಕ್ಷಣಗಳನ್ನು ಸೆರೆ ಹಿಡಿದು ಅದನ್ನು ಆಕೆಗೆ ತೋರಿಸಿ ಮತ್ತೆ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿದ್ದಾನೆ. ಈ ಸಂಬಂಧ ಪೊಲೀಸ್ ಪ್ರಕರಣ ದಾಖಲಾಗಿದ್ದು, ಇದನ್ನು ರದ್ದು ಕೋರಿ ಪ್ರಿಯಕರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದ. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಲು ನಿರಾಕರಣೆ ಮಾಡಿದೆ.
ಪ್ರಕರಣ ಹಿನ್ನೆಲೆ
ಪ್ರಕರಣದಲ್ಲಿ ಅರ್ಜಿದಾರ ಆರೋಪಿಯು, ಬ್ಲ್ಯಾಕ್‌ಮೇಲ್ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಿ ಸಂತ್ರಸ್ತೆಯು 2025ರ ಮಾ.11ರಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಹಾಗಾಗಿ, ಆರೋಪಿ ಹೈಕೋರ್ಟ್ ಮೊರೆ ಹೋಗಿದ್ದ. ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ, ಆರೋಪಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ.
ಮಹಿಳೆ ಕಿಡ್ನ್ಯಾಪ್ ಪ್ರಕರಣ; ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಶಾಕ್
ಆರೋಪಿಯು ತಲೆಮರೆಸಿಕೊಂಡಿದ್ದಾನೆ. ಆರೋಪಿ ತಾನು ಕಾನೂನು ಪಾಲಕನಾಗಿದ್ದು, ನಿರೀಕ್ಷಣಾ ಜಾಮೀನು ನೀಡಬೇಕೆಂದು ಕೋರಿದ್ದಾನೆ. ಆದರೆ, ತಲೆಮರೆಸಿಕೊಂಡಿರುವ ಆರೋಪಿ ಕಾನೂನು ಪಾಲಕನೆಂದು ಹೇಳಿದರೆ ಅದನ್ನು ಪರಿಗಣಿಸಲಾಗದು. ಪೊಲೀಸರು ಸಂಗ್ರಹಿಸಿರುವ ಮಾಹಿತಿ ಪರಿಶೀಲಿಸಿದರೆ ಆರೋಪಿಯ ನೀರೀಕ್ಷಣಾ ಜಾಮೀನು ಅರ್ಜಿ ಪುರಸ್ಕರಿಸುವ ಅಗತ್ಯತೆ ಇಲ್ಲ, ಎಂದು ನ್ಯಾಯಪೀಠ ತಿಳಿಸಿದೆ.
ಪ್ರೀತಿ ಸಂಬಂಧದ ನೆಪದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬನಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ನಿರೀಕ್ಷಣಾ ಜಾಮೀನು ಕೋರಿದ್ದ ವ್ಯಕ್ತಿಯ ಅರ್ಜಿ ತಿರಸ್ಕರಿಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.
Rajpal Yadav : ಪೊಲೀಸರಿಗೆ ಶರಣಾಗುವಂತೆ ನಟ ರಾಜ್‌ಪಾಲ್ ಯಾದವ್‌ಗೆ ಹೈಕೋರ್ಟ್ ಆದೇಶ; ಕಾರಣ ಇದು