ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Politcs: ಸಿಎಂ ಸಿದ್ದರಾಮಯ್ಯ ಆಪ್ತರ ಜೊತೆಗೆ ಸತೀಶ್‌ ಜಾರಕಿಹೊಳಿ ಡಿನ್ನರ್‌ ಮೀಟಿಂಗ್

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಳಗಾವಿ ಉದ್ಯಮಿಗಳೊಂದಿಗೆ ಡಿನ್ನರ್‌ ಪಾರ್ಟಿ ಆಯೋಜಿಸಿದ್ದ ಬಳಿಕ ಸಚಿವ ಸತೀಶ ಜಾರಕಿಹೊಳಿ (Satish Jarkiholi) ಅವರು ಕೂಡ ಮಂಗಳವಾರ ರಾತ್ರಿಯಷ್ಟೇ ದಲಿತ ಉದ್ಯಮಿಗಳಿಗೆ ರಾತ್ರಿ ಡಿನ್ನರ್‌ ಸಭೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೆ ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಡಿನ್ನರ್‌ ಪಾರ್ಟಿ ಆಯೋಜಿಸಿದ್ದರು.

ಸತೀಶ್‌ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಡಿ.19 : ಚಳಿಗಾಲದ ಅಧಿವೇಶನ (Winter Session) ಮುಗಿಯುವ ಅವಧಿ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ (Karnataka Politcs) ಮತ್ತೆ ಬಣ ರಾಜಕೀಯ, ಡಿನ್ನರ್‌ ಪಾರ್ಟಿಗಳು ಜೋರಾಗಿವೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ (satish jarkiholi) ಬುಧವಾರ ರಾತ್ರಿ ಬೆಳಗಾವಿಯಲ್ಲಿ ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದರು. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramaiah) ಪುತ್ರ ಮತ್ತು ಆಪ್ತ ಶಾಸಕರೇ ಹೆಚ್ಚಾಗಿ ಪಾಲ್ಗೊಂಡಿದ್ದರು ಎಂದು ಮೂಲಗಳು ಹೇಳಿವೆ.

ಅಧಿವೇಶನ ಸಂದರ್ಭದಲ್ಲಿಯೇ ಹೆಚ್ಚಾಗಿ ಡಿನ್ನರ್‌ ಪಾರ್ಟಿಗಳು ಕಂಡುಬಂದಿರುವುದು ಸಹಜವಾಗಿ ಕುತೂಹಲ ಮೂಡಿಸಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಳಗಾವಿ ಉದ್ಯಮಿಗಳೊಂದಿಗೆ ಡಿನ್ನರ್‌ ಪಾರ್ಟಿ ಆಯೋಜಿಸಿದ್ದ ಬಳಿಕ ಸಚಿವ ಸತೀಶ ಜಾರಕಿಹೊಳಿ ಅವರು ಕೂಡ ಮಂಗಳವಾರ ರಾತ್ರಿಯಷ್ಟೇ ದಲಿತ ಉದ್ಯಮಿಗಳಿಗೆ ರಾತ್ರಿ ಡಿನ್ನರ್‌ ಸಭೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೆ ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಡಿನ್ನರ್‌ ಪಾರ್ಟಿ ಆಯೋಜಿಸಿದ್ದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಹಾಗೂ ವಿಧಾನ ಪರಿಷತ್‌ ಸದಸ್ಯ ಯತೀಂದ್ರ, ಶಾಸಕರಾದ ಗಣೇಶ ಹುಕ್ಕೇರಿ, ಕೆ.ಎನ್‌.ರಾಜಣ್ಣ, ಆಸೀಫ್‌ ಸೇಠ್‌, ಮಹಾಂತೇಶ ಕೌಜಲಗಿ, ಚಳ್ಳಕೆರೆ ರಾಮನಾಥ, ವಿಶ್ವಾಸ ವೈದ್ಯ, ಬಿ.ಆರ್‌.ಪಾಟೀಲ ಸೇರಿದಂತೆ ಸುಮಾರು 20ಕ್ಕೂ ಅಧಿಕ ಶಾಸಕರು ಪಾಲ್ಗೊಂಡಿದ್ದರು ಎನ್ನಲಾಗಿದೆ. ವಿಶೇಷವೆಂದರೆ ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಆಪ್ತರೆ ಹೆಚ್ಚಾಗಿ ಕಂಡುಬಂದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತದೆಯೇ? ಡಿನ್ನರ್‌ ಮೀಟ್‌ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್

ಅಧಿವೇಶನದ ಮುಕ್ತಾಯದ ನಂತರ ಸಿಎಂ ಮತ್ತು ಡಿಸಿಎಂ ಅವರು ದೆಹಲಿ ವರಿಷ್ಠರ ಭೇಟಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಡಿನ್ನರ್‌ ಪಾರ್ಟಿ ಕೂಡ ತೀವ್ರ ಕುತೂಹಲ ಮೂಡಿಸಿದೆ. ಅಧಿವೇಶನ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾತುಕತೆಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ

ಈ ನಡುವೆ ಮಾಜಿ ಸಚಿವ, ಗೋಕಾಕ್‌ನ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಏಕಾಂಗಿಯಾಗಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚಿಸಿರೋದು ಸಂಚಲನ ಮೂಡಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸರ್ಕೀಟ್‌ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಮೇಶ್‌ ಜಾರಕಿಹೊಳಿ ಭೇಟಿ ಮಾಡಿದರು. ಆರೋಗ್ಯ ವಿಚಾರಿಸಲು ಬಂದಿದ್ದೆ ಎಂದು ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರೂ, ಸಿಎಂ ಜೊತೆ ಕೊಠಡಿಯಲ್ಲಿ ಕೆಲ ಹೊತ್ತು ರಹಸ್ಯ ಮಾತುಕತೆ ನಡೆಸಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಹರೀಶ್‌ ಕೇರ

View all posts by this author