Karnataka Politics: ಸಿಎಂ ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ನಡುವೆ ನಾಳೆ ಇನ್ನೊಂದು ಬ್ರೇಕ್‌ಫಾಸ್ಟ್ ಮೀಟಿಂಗ್
ಮೊದಲ ಮೀಟಿಂಗ್ ಬಳಿಕ ಸಿಎಂ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಒಗ್ಗಟ್ಟಿನ ಸಂದೇಶ ರವಾನಿಸಿ, ಏನೇ ಇದ್ದರೂ ಹೈಕಮಾಂಡ್ ಹೇಳಿದಂತೆ ನಡೆಯುತ್ತೇವೆ ಎಂದಿದ್ದರು. ಆ ಬಳಿಕ ಸಿದ್ದರಾಮಯ್ಯ (CM Siddaramaiah) ಅವರು, ಡಿಕೆಶಿ ಕೂಡ ಮನೆಗೆ ಆಹ್ವಾನಿಸಿದ್ದಾರೆ, ಹೋಗುತ್ತೇನೆ ಎಂದಿದ್ದರು. ಇದೀಗ ಅದಕ್ಕೂ ಮುಹೂರ್ತ ಫಿಕ್ಸ್ ಆಗಿದ್ದು, ಮಂಗಳವಾರ ಬೆಳಗ್ಗೆ 9.30ಕ್ಕೆ ಡಿಕೆಶಿ ನಿವಾಸದಲ್ಲಿ ಮೀಟಿಂಗ್ ನಡೆಯಲಿದೆ.
ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ -
ಬೆಂಗಳೂರು, ಡಿ.1: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಅಧಿಕಾರ ಹಂಚಿಕೆ (Karnataka politics) ತಿಕ್ಕಾಟ ತೀವ್ರಗೊಂಡ ಬೆನ್ನಲ್ಲೇ ಶನಿವಾರ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಕಾವೇರಿ ನಿವಾಸದಲ್ಲಿ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ನಡೆದಿತ್ತು. ಬಳಿಕ ಇಬ್ಬರೂ ಒಗ್ಗಟ್ಟಾಗಿ ಇದ್ದೇವೆ ಎಂಬ ಸಂದೇಶ ಸಾರಿದ್ದರು. ಇದೀಗ ಡಿಕೆ ಶಿವಕುಮಾರ್ (DCM DK Shivakumar) ಅವರ ಸದಾಶಿವನಗರದ ಖಾಸಗಿ ನಿವಾಸದಲ್ಲಿ ಇನ್ನೊಂದು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯಲಿದ್ದು, ಅದಕ್ಕೆ ಸಿಎಂ ಸಿದ್ದರಾಮಯ್ಯ ಹೋಗಲಿದ್ದಾರೆ.
ಮೊದಲ ಮೀಟಿಂಗ್ ಬಳಿಕ ಸಿಎಂ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ ರವಾನಿಸಿ, ಏನೇ ಇದ್ದರೂ ಹೈಕಮಾಂಡ್ ಹೇಳಿದಂತೆ ನಡೆಯುತ್ತೇವೆ ಎಂದಿದ್ದರು. ಆ ಬಳಿಕ ಸಿದ್ದರಾಮಯ್ಯ ಅವರು, ಡಿಕೆಶಿ ಕೂಡ ಮನೆಗೆ ಆಹ್ವಾನಿಸಿದ್ದಾರೆ, ಹೋಗುತ್ತೇನೆ ಎಂದಿದ್ದರು. ಇದೀಗ ಅದಕ್ಕೂ ಮುಹೂರ್ತ ಫಿಕ್ಸ್ ಆಗಿದ್ದು, ಮಂಗಳವಾರ ಬೆಳಗ್ಗೆ 9.30ಕ್ಕೆ ಡಿಕೆಶಿ ನಿವಾಸದಲ್ಲಿ ಮೀಟಿಂಗ್ ನಡೆಯಲಿದೆ.
ಈ ಮಧ್ಯೆ, ಅಧಿಕಾರ ಹಂಚಿಕೆ ತಿಕ್ಕಾಟದ ಅಂತಿಮ ನಿರ್ಧಾರ ಈಗ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಭಾನುವಾರ ಮಹತ್ವದ ಸಭೆ ನಡೆದಿದ್ದು, ಆದಷ್ಟು ಬೇಗನೆ ಪರಿಹಾರ ಸೂಚಿಸುವಂತೆ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು ತುಸು ಮಟ್ಟಿಗೆ ಶಮನಗೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ. ಖರ್ಗೆ ಕರ್ನಾಟಕದವರೇ ಆಗಿರುವುದರಿಂದ ಯಾವುದೇ ಏಕಪಕ್ಷೀಯ ನಿರ್ಧಾರವಾಗದಂತೆ ನೋಡಿಕೊಳ್ಳಲು ಎಲ್ಲ ಉನ್ನತ ಮಟ್ಟದ ನಾಯಕರನ್ನು ಜತೆ ಕರೆದು ಚರ್ಚಿಸಲು ಮುಂದಾಗಿದ್ದಾರೆ.
ಈ ಹಿನ್ನೆಲೆ, ಖರ್ಗೆ ಅವರು ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ವೇಣುಗೋಪಾಲ್ ಹಾಗೂ ಎಐಸಿಸಿಯ ಇತರ ಹಿರಿಯ ನಾಯಕರು ಹಾಗೂ ಗಾಂಧಿ ಕುಟುಂಬದವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಪಕ್ಷದ ಒಳ ಕಲಹ ತೀವ್ರಗೊಳ್ಳದಂತೆ ಪಾರದರ್ಶಕವಾಗಿ ಎಲ್ಲ ನಾಯಕರಿಂದ ‘ಮುಕ್ತ ಅಭಿಪ್ರಾಯ ಸಂಗ್ರಹ’ ನಡೆಸುವ ಕಾರ್ಯ ಪ್ರಗತಿಯಲ್ಲಿದೆ.
ಡಿಕೆಶಿ ಟೆಂಪಲ್ ರನ್; ಮಂಡ್ಯದ ಭೂವರಾಹಸ್ವಾಮಿ ದೇಗುಲಕ್ಕೆ ಭೇಟಿ
ಮತ್ತೊಂದೆಡೆ, ತಮ್ಮ ನಡುವೆ ಗೊಂದಲಗಳೇನೂ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರೂ ಸತತ ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳು ನಡೆಯುತ್ತಿರುವುದು ಏಕೆ? ಇದು ತಮ್ಮ ಸೌಹಾರ್ದವನ್ನು ಜನಗಳ ಮುಂದೆ ಪ್ರದರ್ಶಿಸುವ ನಡೆ ಅಷ್ಟೇನಾ ಎಂಬ ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಮೂಡಿದೆ.