ಬೆಳಗಾವಿ, ಡಿ.12: ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಡಿನ್ನರ್ ಪಾಲಿಟಿಕ್ಸ್ (Karnataka politics) ತೀವ್ರಗೊಂಡಿದ್ದು, ಗುರುವಾರ ರಾತ್ರಿ ತಮ್ಮ ಆಪ್ತ ಗಣಿ ಉದ್ಯಮಿ ದೊಡ್ಡಣ್ಣವರ್ ಅವರ ಫಾರ್ಮ್ ಹೌಸ್‌ನಲ್ಲಿ ಆಪ್ತ ಸಚಿವರು, ಶಾಸಕರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸಭೆ ನಡೆಸಿದ್ದಾರೆ. ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ (CM Siddaramaiah) ಅಹಿಂದ ನಾಯಕರ ಜೊತೆ ಸಭೆ ನಡೆಸಿದ್ದರು. ಅದರ ಬೆನ್ನಲ್ಲೇ ಇದು ನಡೆದಿದೆ.
ಡಿಕೆಶಿ ಸಹೋದರ ಡಿಕೆ ಸುರೇಶ್ ಅವರು ಶಾಸಕರಿಗೆ ಈ ಡಿನ್ನರ್ ವ್ಯವಸ್ಥೆ ಮಾಡಿದ್ದರು. ಈ ಡಿನ್ನರ್ ಸಭೆಯಲ್ಲಿ ಐದಕ್ಕೂ ಹೆಚ್ಚು ಸಚಿವರು, 40ಕ್ಕೂ ಹೆಚ್ಚು ಶಾಸಕರು ಸೇರಿದಂತೆ ಆಪ್ತರು ಭಾಗಿಯಾಗಿದ್ದರು. ಸಿಎಂ ಬಣದವರಿಗೆ ಆಹ್ವಾನ ನೀಡದೇ ಡಿಕೆಶಿ ಆಪ್ತರು ಮಾತ್ರ ಈ ಡಿನ್ನರ್‌ನಲ್ಲಿ ಪಾಲ್ಗೊಂಡಿದ್ದರು.
ಎಂ.ಸಿ ಸುಧಾಕರ್, ಮಂಕಾಳ ವೈದ್ಯ, ಕೆ.ಎಚ್. ಮುನಿಯಪ್ಪ, ಶರಣಪ್ರಕಾಶ್ ಪಾಟೀಲ್, ಡಿ.ಕೆ.ಸುರೇಶ್, ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ, ಶಾಸಕ ಬಾಬಾಸಾಹೇಬ್ ಪಾಟೀಲ್, ಶಿವರಾಂ ಹೆಬ್ಬಾರ್, ಸಿ.ಪಿ ಯೋಗೇಶ್ವರ್, ಶ್ರೀನಿವಾಸ್ ಮಾನೆ, ಎನ್‌ಎ ಹ್ಯಾರೀಸ್, ಇಕ್ಬಾಲ್ ಹುಸೇನ್, ಗಣೇಶ್ ಹುಕ್ಕೇರಿ, ಎಸ್ ಟಿ ಸೋಮಶೇಖರ್, ಎಂಎಲ್‌ಸಿ ರವಿ, ಸೇರಿ 40ಕ್ಕೂ ಹೆಚ್ಚು ಶಾಸಕರು, ಸಚಿವರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಕಾಂಗ್ರೆಸ್ ನಾಯಕತ್ವ ಕುರಿತು ಮತ್ತೆ ಯತೀಂದ್ರ ಹೇಳಿಕೆ; ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು!
ಬುಧವಾರ ರಾತ್ರಿ ಮಾಜಿ ಶಾಸಕ ಫಿರೋಜ್ ಸೇಠ್ ಅವರ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಬಣದ ಯಾವೊಬ್ಬ ಶಾಸಕರೂ ಭಾಗವಹಿಸಿರಲಿಲ್ಲ. ಇದೀಗ ಡಿಸಿಎಂ ಬಣ ಪ್ರತ್ಯೇಕ ಡಿನ್ನರ್ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಸ್ಥಾನದ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಪದೇ ಪದೆ ಹೇಳಿಕೆ ಬಗ್ಗೆಯೇ ಡಿಕೆಶಿ ಕರೆದಿದ್ದ ಡಿನ್ನರ್ ಮೀಟಿಂಗ್‌ನಲ್ಲಿ ಹೆಚ್ಚು ಚರ್ಚೆಯಾಗಿದೆ ಎನ್ನಲಾಗಿದೆ. ಯತೀಂದ್ರರಿಗೆ ನೋಟೀಸ್ ಕೊಡಿ ಎಂದು ಕೆಲ ಶಾಸಕರು ಡಿಕೆಶಿಗೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಮುಂದಿನ ವಾರ ಡಿಕೆಶಿ ಅವರನ್ನು ದೆಹಲಿಗೆ ಕರೆದಿರುವ ಬಗ್ಗೆ ಕೂಡ ಚರ್ಚೆಯಾಗಿದೆ.
ಅನಗತ್ಯ ಹೇಳಿಕೆ ಬೇಡ: ಪುತ್ರನಿಗೆ ಸಿಎಂ ಎಚ್ಚರಿಕೆ; ಡಿಕೆ ಶಿವಕುಮಾರ್, ಜಮೀರ್ ಹೇಳಿದ್ದೇನು?