Karnataka Rains: ಕದ್ರಾ-ಕೊಡಸಳ್ಳಿ ಮಾರ್ಗದಲ್ಲಿ ಗುಡ್ಡ ಕುಸಿತ; ರಸ್ತೆ ಸಂಚಾರ ಸ್ಥಗಿತ
Karnataka Rains: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಗುರುವಾರ ರಾತ್ರಿಯಿಂದ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕದ್ರಾದಿಂದ ಕೊಡಸಳ್ಳಿಗೆ ಸಾಗುವ ಮಾರ್ಗ ಮಧ್ಯದಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದೆ. ಈ ಕುರಿತ ವಿವರ ಇಲ್ಲಿದೆ.


ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಗುರುವಾರ ರಾತ್ರಿಯಿಂದ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯ (Karnataka Rains) ಹಿನ್ನೆಲೆಯಲ್ಲಿ ಕದ್ರಾದಿಂದ ಕೊಡಸಳ್ಳಿಗೆ ಸಾಗುವ ಮಾರ್ಗ ಮಧ್ಯದಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದೆ. ಕದ್ರಾ, ಬಾಳೆಮನಿ ಹಾಗೂ ಸುಳಗೇರಿ ಮಾರ್ಗವಾಗಿ ಕೊಡಸಳ್ಳಿ ಡ್ಯಾಂನತ್ತ ಸಾಗುವ ರಸ್ತೆಯ ಮೇಲೆಯೇ ಗುಡ್ಡ ಕುಸಿದಿದ್ದು, ರಸ್ತೆಗೆ ಮಣ್ಣು ಮತ್ತು ಕಲ್ಲು ಬಿದ್ದು ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ ಎಂದು ತಿಳಿದುಬಂದಿದೆ.
ಅರಣ್ಯ ಪ್ರದೇಶವಾಗಿರುವುದರಿಂದ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ನಿರಂತರ ಭಾರೀ ಮಳೆಯಿಂದಾಗಿ ಮಣ್ಣು ತೆಗೆಯುವ ಕಾರ್ಯಕ್ಕೂ ವಿಳಂಬ ಉಂಟಾಗುತ್ತಿದೆ. ಇದೀಗ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ಆರಂಭವಾಗಿದೆ.
Karnataka Rains: ಆರೆಂಜ್ ಅಲರ್ಟ್; ನಾಳೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!
ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ವ್ಯಾಪಕವಾಗಿ ಮಳೆಯಾಗುವ (Karnataka Rains) ಮುನ್ಸೂಚನೆ ಸಿಕ್ಕಿದೆ. ಜುಲೈ 5ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 6ರಂದು ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 7ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಜುಲೈ 8ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಕೊಪ್ಪಳ, ಕಲಬುರ್ಗಿ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೋಲಾರ ಸೇರಿ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 9ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಕೊಪ್ಪಳ, ಕಲಬುರ್ಗಿ, ಹಾವೇರಿ, ವಿಜಯಪುರ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು ಸೇರಿ ವಿವಿಧ ಜಿಲ್ಲೆಗಳಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Tigers Death: ಹುಲಿಗಳ ಸಾವು, 4 ಅಧಿಕಾರಿಗಳ ಅಮಾನತಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು