Karnataka Rains: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಜುಲೈ 9ರವರೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.


ಬೆಂಗಳೂರು: ಕರಾವಳಿ ಜಿಲ್ಲೆಗಳ ಹಲವೆಡೆ ಶುಕ್ರವಾರ ಭಾರಿ ಮಳೆಯಾಗಿದೆ. ಅದೇ ರೀತಿ ಜುಲೈ 6ರಂದು ಕೂಡ ಭರ್ಜರಿ ಮಳೆಯಾಗುವ (Karnataka Rains) ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ನೀಡಿದೆ. ಉಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಜುಲೈ 9ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 65 ಕಿ.ಮೀ ಬಿರುಗಾಳಿ ಬೀಸಲಿದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.
ಜುಲೈ 6ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 7ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಬಳ್ಳಾರಿ, ಬೆಂಗಳೂರು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ ಸೇರಿ ಇತರ ಜಿಲ್ಲೆಗಳಲ್ಲಿ ಹಗುರಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
ಜುಲೈ 8ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಜುಲೈ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ಪ್ರತಿದಿನ ತೆಂಗಿನ ನೀರು ಸೇವಿಸಿದರೆ ಕೊಬ್ಬು ಕರಗಿ ತೂಕ ಇಳಿಯುತ್ತಾ?
ಜುಲೈ 10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಕೋಲಾರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ತಿಳಿಸಿದೆ.