SSLC Exam 3 Result 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಇಲ್ಲಿದೆ ಲಿಂಕ್
SSLC Exam 3: ಎಸ್‌ಎಸ್‌ಎಲ್‌ಸಿ ಪರೀಕ್ಷೆ – 3 ಅನ್ನು ಜುಲೈ 5ರಿಂದ 12ರವರೆಗೆ ರಾಜ್ಯದ ಒಟ್ಟು 644 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಇದೀಗ ಫಲಿತಾಂಶ ಬಿಡುಗಡೆಯಾಗಿದ್ದು, ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಫಲಿತಾಂಶ ಮಾಹಿತಿ ನೀಡಿದೆ.


ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ (SSLC Exam 3) ಬುಧವಾರ ಪ್ರಕಟವಾಗಿದೆ. ಜುಲೈ 5ರಿಂದ 12ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-3 ನಡೆದಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾದ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಫಲಿತಾಂಶ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು https://kseab.karnataka.gov.in/ ಜಾಲತಾಣದಲ್ಲಿ ವೀಕ್ಷಿಸಬಹುದು.
ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆ, ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ನೋಡಬಹುದು. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 3 ಅನ್ನು ಜುಲೈ 5ರಿಂದ 12ರವರೆಗೆ ಒಟ್ಟು 644 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದ್ಯಂತ ನಡೆಸಲಾಗಿತ್ತು. ರಾಜ್ಯದ 27 ಶೈಕ್ಷಣಿಕ ಜಿಲ್ಲೆಗಳ 88 ಮೌಲ್ಯಮಾಪನ ಕೇಂದ್ರಗಳಲ್ಲಿ 20,443 ಮೌಲ್ಯಮಾಪಕರಿಂದ ಮೌಲ್ಯಮಾಪನ ನಡೆದಿದೆ. ಶಾಲೆಗಳ ಕ್ರೋಡೀಕೃತ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಡಲಿಯ ಜಾಲತಾಣ https://kseah.karriataka.gov.in ದ ಶಾಲಾ ಲಾಗಿನ್‌ನಲ್ಲಿ ನೀಡಲಾಗುವುದು. ಶಾಲಾ ಹಂತದಲ್ಲಿ ಅಂಕಪಟ್ಟಿ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | IBPS Recruitment: ಬ್ಯಾಂಕ್ ಉದ್ಯೋಗಾರ್ಥಿಗಳಿಗೆ ಗುಡ್‌ನ್ಯೂಸ್; 6,215 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ IBPS

ಇನ್ನು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಜುಲೈ 24ರಿಂದ 28ರವರೆಗೆ ಅವಕಾಶ ನೀಡಲಾಗಿದೆ. ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಿದ ನಂತರ Offline ಚಲನ್ ಡೌನ್‌ಲೋಡ್ ಮಾಡಿಕೊಂಡು, ಶುಲ್ಕವನ್ನು ಪಾವತಿಸಲು ಜುಲೈ 29 ಅಂತಿಮ ದಿನಾಂಕವಾಗಿದೆ.
ಉತ್ತರ ಪತ್ರಿಕೆಗಳ ಮರು ಎಣಿಕೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಜುಲೈ 27ರಿಂದ 31ರವರೆಗೆ ಅರ್ಜಿ ಸಲ್ಲಿಸಬಹುದು. ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು, ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ನಂತರ Offline ಚಲನ್ ಡೌನ್ ಲೋಡ್ ಮಾಡಿಕೊಂಡು, ಶುಲ್ಕವನ್ನು ಪಾವತಿಸಲು ಆ. 1 ಅಂತಿಮ ದಿನಾಂಕವಾಗಿದೆ.