ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka SSLC Result: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ, ಶೇ. 94.10 ಉತ್ತೀರ್ಣ, ದಕ ಜಿಲ್ಲೆ ಪ್ರಥಮ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ 7,70,209 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದಿವೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ, ಶೇ. 94.10 ಉತ್ತೀರ್ಣ

ಎಸ್‌ಎಸ್‌ಎಲ್‌ಸಿ ಫಲಿತಾಂಶ -

ಹರೀಶ್‌ ಕೇರ
ಹರೀಶ್‌ ಕೇರ Apr 23, 2026 12:19 PM

ಬೆಂಗಳೂರು, ಏ.23: ಕರ್ನಾಟಕದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಐತಿಹಾಸಿಕ ದಾಖಲೆ ಫಲಿತಾಂಶ ಲಭ್ಯವಾಗಿದ್ದು, ಶೇಕಡ 94.10 ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿವರ ಪ್ರಕಟಿಸಿದರು. 7,70,209 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದಿವೆ.

ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದು 625 ಕ್ಕೆ 625 ಅಂಕಗಳನ್ನು ಮೂರು ವಿದ್ಯಾರ್ಥಿಗಳು ಗಳಿಸಿದ್ದಾರೆ. ಬೆಳಗಾವಿಯ ರೂಪ ಚೆನ್ನಗೌಡ ಪಾಟೀಲ್ ಗೆ 625ಕ್ಕೆ 625, ಹಾಸನದ ಜಾನವಿ ಹಾಗೂ ಉತ್ಸವ್ ಪಾಟೀಲ್ 625 ಕ್ಕೆ 625 ಅಂಕಗಳು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ರಾಜ್ಯಕ್ಕೆ ಈ ಮೂವರು ಟಾಪರ್ ಗಳಾಗಿ ಹೊರಹೊಮ್ಮಿದ್ದಾರೆ.

ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದಿದ್ದ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯಾದ್ಯಂತ 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8,12,855 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುತ್ತಿದ್ದರೆ, 62,845 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು 27,189 ಖಾಸಗಿ ವಿದ್ಯಾರ್ಥಿಗಳು.

ಫಲಿತಾಂಶ ಇಲ್ಲಿ ನೋಡಿ:

- ಪರೀಕ್ಷೆ ಫಲಿತಾಂಶವನ್ನು karresults.nic.in ಅಥವಾ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ವೀಕ್ಷಿಸಬಹುದಾಗಿದೆ.

- ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‌ಎಂಎಸ್ (SMS) ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ.

- ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026 ಡಿಜಿಲಾಕರ್ ಮೂಲಕವೂ ಲಭ್ಯವಾಗಲಿದೆ. ಅಂಕಪಟ್ಟಿಯನ್ನು ಡಿಜಿಲಾಕರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳವ ಪ್ರಕ್ರಿಯೆಯನ್ನು ಈ Video link https://www.youtube.com/shorts/mu-B4tBwaf8 ಬಳಸಿ ತಿಳಿದುಕೊಳ್ಳಬಹುದು.

- ಫಲಿತಾಂಶ ಪಟ್ಟಿಯು ಸಂಬಂಧಿತ ಶಾಲೆಗಳಿಗೆ ಏಪ್ರಿಲ್‌ 23 ಮಧ್ಯಾಹ್ನ 12 ಗಂಟೆಗೆ ಲಭ್ಯವಾಗಲಿದೆ ಎಂದು ಪರೀಕ್ಷಾ ಮಂಡಲಿ ತಿಳಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ನೋಡುವುದು ಹೇಗೆ?

ಮೊದಲು ಕೆಎಸ್ಎಇಅಬಿ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ಕೊಡಿ ಜಾಲತಾಣದ ಪರದೆ ಮೇಲೆ ಕಾಣುವ SSLC Result 2026 ಆಯ್ಕೆ ಮೇಲೆ ಕ್ಲಿಕ್ ಮಾಡಿ ಬಳಿಕ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ಮಾಹಿತಿ ನಮೂದಿಸಿ ವಿವರ ಹಾಕಿದ ಬಳಿಕ ಸಲ್ಲಿಸು/ಸಮ್ಮಿಟ್ ಬಟನ್ ಒತ್ತಿ ಪರದೆ ಮೇಲೆ SSLC 2026 ಅಂಕಪಟ್ಟಿ ಕಾಣಿಸುತ್ತದೆ ನಿಮ್ಮ ಅಂಕಪಟ್ಟಿಯೇ ಎಂದು ಪರಿಶೀಲಿಸಿಕೊಂಡು ಡೌನ್‌ಲೋಡ್ ಮಾಡಿಕೊಳ್ಳಬಹುದು. ಡಿಜಿಲಾಕರ್ ಮತ್ತು ಕರ್ನಾಟಕ ಒನ್ ಅಪ್ಲಿಕೇಶನ್‌ನಲ್ಲೂ ಸಹ KSEAB 10 ನೇ ತರಗತಿ ಅಂಕಪಟ್ಟಿ 2026 ದೊರೆಯಲಿದೆ.