ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Internal reservation: ಒಳ ಮೀಸಲಾತಿ ಜಾರಿಗೆ ಕಾಯಿದೆ: ಇಂದು ಸಚಿವ ಸಂಪುಟ ಸಭೆಯಲ್ಲಿ ಕರಡು ಬಿಲ್ ಮಂಡನೆ

ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ, ಸುದೀರ್ಘವಾಗಿ ಚರ್ಚಿಸಲಾಯಿತು. ಇಂದು ಸಚಿವ ಸಂಪುಟ ಸಭೆ ಚರ್ಚೆ ನಡೆಸಲಿದೆ.

ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ (Internal reservation) ಅನುಷ್ಠಾನಗೊಳಿಸುವ ಸಂಬಂಧ ನೂತನ ಕಾಯಿದೆ ಜಾರಿಗೆ ರಾಜ್ಯ ಸರ್ಕಾರ (Karnataka government) ಮುಂದಾಗಿದ್ದು, ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಡು ವಿಧೇಯಕ ಮಂಡಿಸಲು ನಿರ್ಧರಿಸಲಾಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆ ನಡೆಸಿ, ಸುದೀರ್ಘವಾಗಿ ಚರ್ಚಿಸಲಾಯಿತು.

ಈ ಕುರಿತು ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ವಿವರ ನೀಡಲಾಗಿದೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆ ನಡೆಸಿ, ಸುದೀರ್ಘವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಮುಖ್ಯಮಂತ್ರಿಗಳ ಮಾತುಗಳು:

  • ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ಯಾವುದೇ ಜಾತಿಗೆ ರೋಸ್ಟರ್‌ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು.



  • ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.

  • ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂ ಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

ಇದನ್ನೂ ಓದಿ: 8th Pay Commission: ಸರ್ಕಾರಿ ನೌಕರರಿಗೆ ಕೇಂದ್ರದಿಂದ ಗುಡ್‌ನ್ಯೂಸ್‌; 8ನೇ ವೇತನ ಆಯೋಗಕ್ಕೆ ಸಂಪುಟ ಅನುಮೋದನೆ

ಹರೀಶ್‌ ಕೇರ

View all posts by this author