ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Weather: 15 ಡಿಗ್ರಿಗೆ ಇಳಿದ ಬೆಂಗಳೂರು ತಾಪಮಾನ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ರಾಜ್ಯದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ತಾಪಮಾನ ಇಳಿಕೆ

ಬೆಂಗಳೂರು, ಜ.09: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಶುಷ್ಕ ವಾತಾವರಣವಿತ್ತು. ಇಂದು ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ (Bengaluru) ಚಳಿಯ ತೀವ್ರತೆ (Temperature) ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ಮುಂಜಾನೆ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ರಾಜ್ಯದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ದಾವಣಗೆರೆ, ಹಾವೇರಿ,ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತದಲೆಯ ಪ್ರಮಾಣ ಹೆಚ್ಚಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಮುಂದಿನ 24 ರಿಂದ 48 ಗಂಟೆಯವರೆಗೆ ಇದೇ ತಾಪಮಾನ ಮುಂದುವರೆಯಲಿದ್ದು, ಬೆಚ್ಚಗಿನ ಉಡುಪು ಧರಿಸಿ ಸುರಕ್ಷಿತವಾಗಿರುವಂತೆ ಇಲಾಖೆ ತಿಳಿಸಿದೆ.

Health Tips: ಚಳಿ ಚಳಿ ತಾಳೆನು ಈ ಚಳಿಯ...ಚಳಿಯಿಂದ ನಿಮ್ಮ ಅರೋಗ್ಯವನ್ನು ಹೀಗೆ ಕಾಪಾಡಿಕೊಳ್ಳಿ

ಎಲ್ಲೆಲ್ಲಿ ಮಳೆ ಮತ್ತು ಒಣಹವೆ?

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಸೇರಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದೇ ವೇಳೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡಿರುವ ಒಣ ಹವೆಯ ವಾತಾವರಣ ಇಂದು ಸಹ ಮುಂದುವರಿಯಲಿದೆ.

Clitoria ternatea: ಚಳಿ-ಮಳೆಗಿರಲಿ ಶಂಖಪುಷ್ಪ ಹೂವಿನ ಚಹಾ!

ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು ಹಾಗೂ ಬಿಸಿ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಹರೀಶ್‌ ಕೇರ

View all posts by this author