ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Weather: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಇಂದು- ನಾಳೆ ಮಳೆ, ಬೆಂಗಳೂರು- ಒಳನಾಡು ಗಡಗಡ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಭಾವದಿಂದಾಗಿ ನಾಳೆಯಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 5 ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಇಳಿಕೆ ಆಗಲಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಇಂದು- ನಾಳೆ ಮಳೆ, ಒಳನಾಡು ಗಡಗಡ

ಬೆಂಗಳೂರಿನಲ್ಲಿ ಮಳೆ ಸಾಧ್ಯತೆ -

ಹರೀಶ್‌ ಕೇರ
ಹರೀಶ್‌ ಕೇರ Jan 7, 2026 7:51 AM

ಬೆಂಗಳೂರು, ಜ.07: ಇಂದು ಬೆಂಗಳೂರು (Bengaluru) ಸೇರಿದಂತೆ ಕರ್ನಾಟಕದಾದ್ಯಂತ (Karnataka Weather) ಶೀತಗಾಳಿ ಹಾಗೂ ಮೋಡ ಕವಿದ ವಾತಾವರಣವಿದ್ದು, ತಾಪಮಾನ (temperature) ಕನಿಷ್ಠಕ್ಕೆ ಕುಸಿತವಾಗುತ್ತಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೈ ಕೊರೆಯುವ ಚಳಿ (cold) ಇದೆ. ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಭಾರೀ ಚಳಿ ದಾಖಲಾಗಿದೆ. ರಾಜ್ಯದ ಬಯಲು ಪ್ರದೇಶಗಳಲ್ಲಿ ಅತಿ ಕನಿಷ್ಠ ತಾಪಮಾನ 11.6 ಡಿಗ್ರಿ ಸೆಲ್ಸಿಯಸ್ ಧಾರವಾಡ, ಗದಗ ಹಾಗೂ ಬೀದರ್‌ನಲ್ಲಿ ದಾಖಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಇರುವುದರಿಂದ ನಾಳೆಯಿಂದ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಾದ್ಯಂತ ಚಳಿ ವಾತಾವರಣ ಮುಂದುವರಿದಿದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಭಾವದಿಂದಾಗಿ ನಾಳೆಯಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 5 ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಇಳಿಕೆ ಆಗಲಿದೆ. ಇನ್ನು ಕರ್ನಾಟಕದ ಕರಾವಳಿ ಪ್ರದೇಶ ಹಾಗೂ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಮಹತ್ವದ ಬದಲಾವಣೆಗಳು ಇರುವುದಿಲ್ಲ ಎಂದು ಹೇಳಲಾಗಿದೆ.

ಎಲ್ಲೆಲ್ಲಿ ಮಳೆ?

ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಇನ್ನೊಂದು ವಾರ ಚಳಿ ವಾತಾವರಣ ಮುಂದುವರಿಯಲಿದೆ. ಜನವರಿ 08 ರಿಂದ ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ. ಜನವರಿ 09 ಹಾಗೂ ಜನವರಿ 10 ರಂದು ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಆಗಲಿದೆ. ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಅಲ್ಲದೇ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಉತ್ತರ (ಬೆಂಗಳೂರು ಗ್ರಾಮಾಂತರ), ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮಳೆ ಆರ್ಭಟ ಇರಲಿದೆ. ಉಳಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಐಎಂಡಿ ವರದಿ ತಿಳಿಸಿದೆ.

ದಿಲ್ಲಿಯಲ್ಲಿ ಮತ್ತೆ ಅತ್ಯಂತ ಕಳಪೆ ಶ್ರೇಣಿಗೆ ಕುಸಿದ ವಾಯುಗುಣಮಟ್ಟ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ

ಇನ್ನು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ ಆಗಲಿದೆ. ಆಗ್ನೆಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಪೂರ್ವ ಸಮಭಾಜಕ ಹಿಂದೂ ಮಹಾಸಾಗರದ ಮೇಲೆ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವು ಜನವರಿ 6ರಂದು ಅದೇ ಪ್ರದೇಶದಲ್ಲಿ ಮುಂದುವರಿದಿದೆ.

ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿಮೀ ವರೆಗೆ ವಿಸ್ತರಿಸಿದೆ. ಮುಂದಿನ 24ಗಂಟೆಗಳಲ್ಲಿ ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಮತ್ತು ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ಅದರ ನಂತರ, ಮುಂದಿನ 48 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

Bengaluru Weather: ಈ ಚಳಿಗಾಲದಲ್ಲಿ ಬೆಂಗಳೂರು ಗಡಗಡ! 10 ವರ್ಷದ ನಂತರ ಕನಿಷ್ಠ ತಾಪಮಾನ! ಏನಿದರ ಕಾರಣ?

ಮಾಲ್ಡೀವ್ಸ್ ಮತ್ತು ಅದರ ಪಕ್ಕದ ಲಕ್ಷದ್ವೀಪ ಪ್ರದೇಶದ ಪೂರ್ವದಲ್ಲಿ 3.1 ಕಿ.ಮೀ ಎತ್ತರದಲ್ಲಿರುವ ಪ್ರದೇಶದಲ್ಲಿ ವಾಯು ಪರಿಚನಲೆಯು ಮುಂದುವರಿಯುತ್ತದೆ. ಒಂದು ಚಂಡಮಾರುತದ ಪರಿಚಲನೆಯು ಪೂರ್ವ ಮಧ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಲಕ್ಷದ್ವೀಪ ಪ್ರದೇಶದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿಮೀ ಎತ್ತರದಲ್ಲಿದೆ. ಮತ್ತೊಂದು ಚಂಡಮಾರುತದ ಪರಿಚಲನೆಯು ಕೊಮೊರಿಯನ್ ಪ್ರದೇಶ ಮತ್ತು ನೆರೆಹೊರೆಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿಮೀ ಎತ್ತರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.