ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Weather: ರಾಜಧಾನಿಯಲ್ಲಿ ಏರುತ್ತಿದೆ ಬಿಸಿಲಿನ ತಾಪ, ರಾಜ್ಯಾದ್ಯಂತ ಶುಷ್ಕ ವಾತಾವರಣ

ನಗರದಲ್ಲಿ ಬಿಸಿಲು ಏರುತ್ತಿದೆ. ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಸಂಚಾರ ಮಾಡುವುದು ಕಷ್ಟಕರವಾಗಿದೆ. ಹವಾಮಾನ ಇಲಾಖೆ ತಜ್ಞರ ಪ್ರಕಾರ, ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

ರಾಜಧಾನಿಯಲ್ಲಿ ಏರುತ್ತಿದೆ ಬಿಸಿಲಿನ ತಾಪ, ರಾಜ್ಯಾದ್ಯಂತ ಶುಷ್ಕ ವಾತಾವರಣ

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Feb 23, 2026 8:51 AM

ಬೆಂಗಳೂರು, ಫೆ.23: ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣ (Karnataka Weather Forecast) ಆವರಿಸಿದ್ದು, ನಿನ್ನೆಯಷ್ಟೇ ಮೋಡ ಕವಿದ ವಾತಾವರಣ ಕಾಣಿಸಿತ್ತು. ಆದರೆ ಇಂದು ಎಲ್ಲೆಡೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎನ್ನಲಾಗಿದೆ.

ನಗರದಲ್ಲಿ ಈಗಾಗಲೇ ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಸಂಚಾರ ಮಾಡುವುದು ಕಷ್ಟಕರವಾಗಿದ್ದು, ಜನರು ಏರ್ ಕೂಲರ್ ಮತ್ತು ಫ್ಯಾನ್‌ಗಳ ಮೊರೆ ಹೋಗಿದ್ದಾರೆ. ಹವಾಮಾನ ಇಲಾಖೆ ತಜ್ಞರ ಪ್ರಕಾರ, ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು. ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಬೆಳ್ಳಂಬೆಳಿಗ್ಗೆ ನೆತ್ತಿ ಸುಡುವ ಬಿಸಿಲು ಹೊತ್ತು ಮೀರಿದರೆ ಜನ ದಿಗಿಲು

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು,ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.