ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka weather: ರಾಜ್ಯದಲ್ಲಿ ಇಂದು ಸಾಧಾರಣ ಮಳೆ, ಹಲವೆಡೆ ಯೆಲ್ಲೋ ಅಲರ್ಟ್‌

ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಈ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ರಾಜ್ಯದಲ್ಲಿ ಇಂದು ಸಾಧಾರಣ ಮಳೆ, ಹಲವೆಡೆ ಯೆಲ್ಲೋ ಅಲರ್ಟ್‌

ಪ್ರಾತಿನಿಧಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Apr 3, 2026 8:41 AM

ಬೆಂಗಳೂರು, ಏ. 03: ಇಂದು ಬೆಂಗಳೂರು (Bengaluru) ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ (rain) ಸಾಧ್ಯತೆ ಇದೆ ಎನ್ನಲಾಗಿದೆ. ವಾತಾವರಣದಲ್ಲಿ ಮಳೆಯಿಂದಾಗಿ ಕಡಿಮೆಯಾಗಿದ್ದ ದೂಳಿನ (dust) ಪ್ರಮಾಣ ಮತ್ತೆ ಏರಲು ಶುರುವಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ (Karnataka weather) ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​(Yellow alert) ಸೂಚಿಸಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​

ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಎಲ್ಲೆಲ್ಲಿ ಮಳೆ?

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲ್ಬುರ್ಗಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.

Bengaluru AQI : ತಂಪಾಯ್ತು ಸಿಟಿ, ವೃದ್ಧಿಯಾಯ್ತು ಗಾಳಿಯ ಗುಣಮಟ್ಟ: ಎಲ್ಲಾ ತುಂತುರು ಮಳೆಯ ಪರಿಣಾಮ

ರಾಜ್ಯಾದ್ಯಂತ ಬಿಸಿ ಮತ್ತು ಆರ್ದ್ರ ವಾತಾವರಣವಿದ್ದರೂ, ಕರಾವಳಿ ಕರ್ನಾಟಕವು ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು, ದೀರ್ಘಾವಧಿಯ ಸರಾಸರಿಗಿಂತ 1.6-3 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಮಳೆಯಾದ ವರದಿಗಳು ಮತ್ತು ಇತರ ಅಂಶಗಳಿಂದಾಗಿ, ಒಳನಾಡಿನ ಕರ್ನಾಟಕದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ.

ಏಪ್ರಿಲ್ 10 ರಿಂದ ರಾಜ್ಯದ ಹಲವೆಡೆ ಮತ್ತೆ ಮಳೆಯ ಅಬ್ಬರ ಜೋರಾಗುವ ಸಾಧ್ಯತೆ ದಟ್ಟವಾಗಿದೆ.ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ಬೆಂಗಳೂರು ದಕ್ಷಿಣ, ಬೆಂಗಳೂರು, ಬೆಂಗಳೂರು ಗ್ರಾಂ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಈ ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಜೂನ್ ತಿಂಗಳಲ್ಲಿ 'ಎಲ್‌ ನಿನೋ' ಪ್ರಭಾವ ಆರಂಭವಾಗಲಿದ್ದು, ಇದು ಈ ಬಾರಿಯ ಮಳೆಗಾಲದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂದು ಮುನ್ಸೂಚನಾ ಸಂಸ್ಥೆಗಳು ಎಚ್ಚರಿಸಿವೆ.