ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Weather: ರಾಜ್ಯಾದ್ಯಂತ ಒಣಹವೆ, ಒಳನಾಡು- ರಾಜಧಾನಿಯಲ್ಲಿ ತೀವ್ರ ಚಳಿ

ಕರ್ನಾಟಕದಾದ್ಯಂತ ಒಣ ಹವಾಮಾನ ಮತ್ತು ತೀವ್ರ ಚಳಿ ಮುಂದುವರಿಯಲಿದೆ. ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಇಂದು ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದ್ದು, ಬೆಚ್ಚಗಿರಲು ಸೂಚಿಸಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.04: ಇಂದು ಕರ್ನಾಟಕದಾದ್ಯಂತ (Karnataka Weather forecast) ಒಣ ಹವೆ (dry weather) ಮುಂದುವರೆದಿದ್ದು, ಕರಾವಳಿ ಮತ್ತು ಒಳನಾಡಿನಲ್ಲಿ ತೀವ್ರ ಚಳಿ ಮುಂದುವರಿದಿದೆ. ಧಾರವಾಡದಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ. ಹವಾಮಾನ ಇಲಾಖೆಯು ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ. ಬೆಂಗಳೂರಿನಲ್ಲಿ (Bengaluru) ರಾತ್ರಿ ಚಳಿಯ ವಾತಾವರಣವಿದ್ದು, ಹಗಲು ಬಿಸಿಲು ಜೋರಾಗಿದೆ.

ಕರ್ನಾಟಕದಾದ್ಯಂತ ಒಣ ಹವಾಮಾನ ಮತ್ತು ತೀವ್ರ ಚಳಿ ಮುಂದುವರಿಯಲಿದೆ. ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಇಂದು ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಪ್ರದೇಶ ಮತ್ತು ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣದ ಜೊತೆಗೆ, ತೀವ್ರ ಚಳಿ ಮುಂದುವರಿಯುವ ಸಾಧ್ಯತೆಯಿದೆ. ಆದರೆ ದಕ್ಷಿಣ ಒಳನಾಡಿನಲ್ಲಿಯೂ ಸಹ ಶುಷ್ಕ ಮತ್ತು ಸ್ಥಿರವಾದ ಹವಾಮಾನವಿರುತ್ತದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶೀತದ ಪರಿಸ್ಥಿತಿ ವಿಶೇಷವಾಗಿ ತೀವ್ರವಾಗಿರುತ್ತದೆ ಎಂದು ಇಲಾಖೆ ತಿಳಿಸಿದೆ. ನಿವಾಸಿಗಳು ಶೀತದ ವಿರುದ್ಧ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ, ವಿಶೇಷವಾಗಿ ರಾತ್ರಿ ಮತ್ತು ಬೆಳಗಿನ ಜಾವದಲ್ಲಿ. ಹವಾಮಾನ ಇಲಾಖೆಯ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಕರಾವಳಿ ಜಿಲ್ಲೆಗಳಲ್ಲಿ ಇಂದು ಒಣಹವೆ ಮುಂದುವರಿಯಲಿದೆ.

Health Tips: ನೀವು ತೂಕ ಇಳಿಸಲು ಟ್ರೈ ಮಾಡ್ತಿದ್ದೀರಾ? ಹಾಗಾದರೆ ಈ ಒಣ ಹಣ್ಣು ನಿಮಗೆ ಸಹಾಯ ಮಾಡಬಹುದು!

ಅದೇ ರೀತಿ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಲವಾರು ದಿನಗಳಿಂದ ಒಣಹವೆ ಉಂಟಾಗಿದ್ದು, ಇಂದು ಅದೇ ಮುಂದುವರೆಯಲಿದೆ. ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರಲ್ಲಿ ಒಣ ಹವೆ ಮುಂದುವರೆಯಲಿದೆ.

Health Tips: ಚಳಿ ಚಳಿ ತಾಳೆನು ಈ ಚಳಿಯ...ಚಳಿಯಿಂದ ನಿಮ್ಮ ಅರೋಗ್ಯವನ್ನು ಹೀಗೆ ಕಾಪಾಡಿಕೊಳ್ಳಿ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊದ್ದುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಹರೀಶ್‌ ಕೇರ

View all posts by this author