Karnataka Weather: ಇನ್ನೂ ಐದು ದಿನ ಬಿಸಿಲಿನ ಝಳ, ಹಲವೆಡೆ ಹೀಟ್ ವೇವ್ ಅಲರ್ಟ್
ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದೂ ಉಷ್ಣ ಅಲೆ ಇರಲಿದ್ದು, ಹೀಟ್ ವೇವ್ ಅಲರ್ಟ್ ನೀಡಲಾಗಿದೆ. ಜೊತೆಗೆ ಗುಡುಗು ಸಹಿತ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಏ.21: ಬೆಂಗಳೂರು (Bengaluru) ಸೇರಿದಂತೆ ಹಲವೆಡೆ ತಾಪಮಾನ (temperature) ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ (Karnataka Weather) ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆಗೆ (heat wave) ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದೂ ಉಷ್ಣ ಅಲೆ ಇರಲಿದ್ದು, ಹೀಟ್ ವೇವ್ ಅಲರ್ಟ್ ನೀಡಲಾಗಿದ್ದು, ಜೊತೆಗೆ ಗುಡುಗು ಸಹಿತ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.
Government Office Timings: ರಾಜ್ಯದಲ್ಲಿ ಭಾರಿ ಬಿಸಿಲು; ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ
ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.
ಇನ್ನೂ 5 ದಿನ ಇದೇ ವಾತಾವರಣ
ಏಪ್ರಿಲ್ 22 ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅಂತೆಯೇ ದಕ್ಷಿಣ ಒಳನಾಡಿನಲ್ಲಿಯೂ ಗುಡುಗು ಸಹಿತ ಮಳೆಯೊಂದಿಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಉಷ್ಣ ಅಲೆ ಇರಲಿದ್ದು, ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಇಲಾಖೆ ತಿಳಿಸಿದೆ. ಜೊತೆಗೆ ಏಪ್ರಿಲ್ 21ರ ವರೆಗೆ ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.