ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka weather: ಈ ವರ್ಷ ಬೆನ್ನು ಸುಡಲಿದೆ ಬಿಸಿಲಿನ ಬೇಗೆ, ಐಎಂಡಿ ಎಚ್ಚರಿಕೆ

2026ರ ಮಾರ್ಚ್‌ನಿಂದ ಮೇ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಲಿದ್ದು, ಕೇರಳ ಮತ್ತು ತಮಿಳುನಾಡು ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ವಾಡಿಕೆಗಿಂತಲೂ ಬಿಸಲು ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಕರ್ನಾಟಕದ ಬಹುತೇಕ ಭಾಗಗಳಿಗೆ ಮಾರ್ಚ್–ಮೇ ಅವಧಿಯಲ್ಲಿ ಉಷ್ಣ ಅಲೆ (ಹೀಟ್‌ವೇವ್) ತೀವ್ರಗೊಳ್ಳುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಿದೆ.

ಈ ವರ್ಷ ಬೆನ್ನು ಸುಡಲಿದೆ ಬಿಸಿಲಿನ ಬೇಗೆ, ಐಎಂಡಿ ಎಚ್ಚರಿಕೆ

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Feb 20, 2026 2:58 PM

ಬೆಂಗಳೂರು, ಫೆ.20: ಕರ್ನಾಟಕದಲ್ಲಿ (Karnataka weather foreast) ಫೆಬ್ರವರಿ ತಿಂಗಳಿನಲ್ಲೇ ತಾಪಮಾನ ಹೆಚ್ಚಾಗಿದೆ. ರಾತ್ರಿ ಇರುತ್ತಿದ್ದ ಚಳಿ ಕಡಿಮೆಯಾಗಿದ್ದು, ಹಗಲು ಬೇಗನೇ ಬಿಸಿಲು ಚುರುಕ್ಕೆನ್ನಿಸುತ್ತಿದೆ. ಈ ನಡುವೆ, ಮಾರ್ಚ್‌ನಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ ಬೇಸಿಗೆ (summer) ಬಿಸಿಲಿನ ಬೇಗೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

2026ರ ಮಾರ್ಚ್‌ನಿಂದ ಮೇ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಲಿದ್ದು, ಕೇರಳ ಮತ್ತು ತಮಿಳುನಾಡು ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ವಾಡಿಕೆಗಿಂತಲೂ ಬಿಸಲು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಉತ್ತರ ಒಳನಾಡು ಕರ್ನಾಟಕದ ಬಹುತೇಕ ಭಾಗಗಳಿಗೆ ಮಾರ್ಚ್–ಮೇ ಅವಧಿಯಲ್ಲಿ ಉಷ್ಣ ಅಲೆ (ಹೀಟ್‌ವೇವ್) ತೀವ್ರಗೊಳ್ಳುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಿದೆ. ಪ್ರಸ್ತುತ ಹೆಚ್ಚಾಗಿರುವ ತಾಪಮಾನವು 3 ರಿಂದ 6 ದಿನಗಳವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ನಂತರ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.

Government Office Timings: ರಾಜ್ಯದಲ್ಲಿ ಭಾರಿ ಬಿಸಿಲು; ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ

ಈ ನಡುವೆ ಕರಾವಳಿ ಮತ್ತು ಉತ್ತರ ಒಳನಾಡು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವೂ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮಾಹಿತಿ ನೀಡಿದೆ. ಮಾರ್ಚ್‌ನಿಂದ ಮೇವರೆಗೆ ಸಂಪೂರ್ಣ ಕರ್ನಾಟಕದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು ಇರುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನ ಶೇಕಡಾ 65 ರಿಂದ 75 ರಷ್ಟು ಹೆಚ್ಚಾಗುವ ಸಾಧ್ಯತೆ ಎಂದು ಐಎಂಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ ಹವಾಮಾನ ತಜ್ಞರು ಫೆಬ್ರವರಿಯಲ್ಲೇ ಉಷ್ಣತೆ ಏರಿಕೆಯಾಗುತ್ತಿರುವುದನ್ನು ಗಮನಿಸಿದ್ದು, ಮುಂದಿನ ತಿಂಗಳುಗಳಲ್ಲಿ ಇದು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ನಾಗರಿಕರು ಈ ಅವಧಿಯಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಐಎಂಡಿ ಸಲಹೆ ನೀಡಿದೆ.