Karnataka Weather: ಹವಾಮಾನ ವರದಿ; ಇಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆರ್ಭಟಿಸಲಿದೆ ಮಳೆ!
Karnataka Rains: ಬೆಂಗಳೂರು ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.


ಬೆಂಗಳೂರು: ರಾಜ್ಯದಲ್ಲಿ ಜುಲೈ 5ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಜುಲೈ 2ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು (Karnataka Weather), ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಬೆಂಗಳೂರು ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.
ಇನ್ನು ಜುಲೈ 3ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 4ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 5ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Health Tips: ಆಹಾರದಲ್ಲಿ ಕೊಬ್ಬು ಇರುವುದು ಅಗತ್ಯವೆ?
ಜುಲೈ 6 ಮತ್ತು 7ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.