ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ತೀವ್ರವಾದ ಚಳಿ, ಉತ್ತರ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್

ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ (Karnataka Weather) ಹಾಗೂ ಶೀತಗಾಳಿ ಇರಲಿದೆ. ಇದು ವಯಸ್ಸಾದವರ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದರ ಜೊತೆಗೆ ಬೆಳೆ ವೈಪರಿತ್ಯವೂ ಉಂಟಾಗಲಿದೆ ಎಂದ ಹವಾಮಾನ ಇಲಾಖೆ ತಿಳಿಸಿದೆ. ಈ ಶೀತಗಾಳಿಯಿಂದ ಮನುಷ್ಯರು ತಮ್ಮನ್ನು ರಕ್ಷಿಸಿಕೊಳ್ಳಬೇಕು. ಬೆಚ್ಚಗಿನ ನೀರು, ಆಹಾರವನ್ನೇ ಸೇವಿಸಬೇಕು. ಇದರ ಜೊತೆಗೆ ಬೆಳೆಗಳನ್ನು ಸಂರಕ್ಷಿಸಲು ಹವಾಮಾನ ತಜ್ಞರು ಕೆಲವೊಂದಿಷ್ಟು ಸೂಚನೆಗಳನ್ನು ನೀಡಿದ್ದಾರೆ.

ತೀವ್ರವಾದ ಚಳಿ, ಉತ್ತರ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಚಳಿ -

ಹರೀಶ್‌ ಕೇರ
ಹರೀಶ್‌ ಕೇರ Dec 15, 2025 10:06 AM

ಬೆಂಗಳೂರು, ಡಿ.15: ಚಳಿ ತೀವ್ರವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ (North Karnatka) 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ (Orange alert) ಘೋಷಣೆ ಮಾಡಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಶೀತಗಾಳಿ (Karnataka weather) ಬೀಸಲಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಈ 9 ಜಿಲ್ಲೆಗಳಲ್ಲಿ ತಾಪಮಾನ (Temperature) ದಿಢೀರ್ ಕುಸಿತ ಕಂಡಿದೆ. ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ. ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು ಜನ ಜೀವನ ತತ್ತರಗೊಂಡಿದೆ. ಕಳೆದ ಹತ್ತು ವರ್ಷಗಳಲ್ಲಿ ಎರಡನೆಯ ಬಾರಿಗೆ ತಾಪಮಾನ ಕನಿಷ್ಠ ಮಟ್ಟ ತಲುಪಿದೆ. 2023ರಲ್ಲಿ‌ ವಿಜಯಪುರದಲ್ಲಿ 6.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಎರಡೂ ದಿನಗಳ ಕಾಲ ಶೀತಗಾಳಿ ಬೀಸಲಿದ್ದು ವಿಜಯಪುರದಲ್ಲಿ ತಾಪಮಾನ 6 ಡಿಗ್ರಿ ಸೆಲ್ಸಿಯಸ್​ಗೆ ಕುಸಿಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Weather: ಬೆಂಗಳೂರಿನಲ್ಲಿ ಮೈ ಕೊರೆಯುವ ಚಳಿ, 10 ವರ್ಷದಲ್ಲಿ ಕನಿಷ್ಠ ತಾಪಮಾನ ದಾಖಲು

ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ ಹಾಗೂ ಶೀತಗಾಳಿ ಇರಲಿದೆ. ಇದು ವಯಸ್ಸಾದವರ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದರ ಜೊತೆಗೆ ಬೆಳೆ ವೈಪರಿತ್ಯವೂ ಉಂಟಾಗಲಿದೆ ಎಂದ ಹವಾಮಾನ ಇಲಾಖೆ ತಿಳಿಸಿದೆ. ಈ ಶೀತಗಾಳಿಯಿಂದ ಮನುಷ್ಯರು ತಮ್ಮನ್ನು ರಕ್ಷಿಸಿಕೊಳ್ಳಬೇಕು. ಬೆಚ್ಚಗಿನ ನೀರು, ಆಹಾರವನ್ನೇ ಸೇವಿಸಬೇಕು. ಇದರ ಜೊತೆಗೆ ಬೆಳೆಗಳನ್ನು ಸಂರಕ್ಷಿಸಲು ಹವಾಮಾನ ತಜ್ಞರು ಕೆಲವೊಂದಿಷ್ಟು ಸೂಚನೆಗಳನ್ನು ನೀಡಿದ್ದಾರೆ.

ಬೆಂಗಳೂರು ನಗರದಲ್ಲಿಯೂ ಮೈ ಕೊರೆಯುವ ಚಳಿ ಮುಂದುವರಿದಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಮಂಜು ಕವಿದ ವಾತಾವರಣ ಇದ್ದು, ಶೀತ ಗಾಳಿ ಬೀಸುತ್ತಿದೆ. ಕನಿಷ್ಠ ತಾಪಮಾನ 14 ರಿಂದ 15 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ವಿಶೇಷವಾಗಿ ಹೆಚ್‌ಎಎಲ್ ವ್ಯಾಪ್ತಿಯಲ್ಲಿ ನಿನ್ನೆ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಚಳಿ ಹಾಗೂ ಶೀತಗಾಳಿಯಿಂದಾಗಿ ಬೆಳಗ್ಗೆ ವಾಕಿಂಗ್‌ಗೆ ಹೋಗಲು ಸಹ ಜನರು ಹಿಂದೇಟು ಹಾಕುತ್ತಿದ್ದಾರೆ.

ಡಿಸೆಂಬರ್‌ನಲ್ಲಿ 12 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತೆ ಅಂತ ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. 2016ರಲ್ಲಿ ಕನಿಷ್ಠ ತಾಪಮಾನ ದಾಖಲಾಗಿತ್ತು. ಇದು ಕಳೆದ ಹತ್ತು ವರ್ಷಗಳಲ್ಲಿ ದಾಖಲಾದ ಅತ್ಯಂತ ಕನಿಷ್ಠ ತಾಪಮಾನವಾಗಿದೆ. ಈ ದಾಖಲೆಯ ಚಳಿ ಮತ್ತೆ ಡಿಸೆಂಬರ್‌ನಲ್ಲಿ ದಾಖಲಾಗುವ ಸಾಧ್ಯತೆಯಿದೆ.