ಬೆಂಗಳೂರು, ಡಿ.15 : ನಗರದಲ್ಲಿ (Bengaluru weather) ಮೈ ಕೊರೆಯುವ ಚಳಿ ಮುಂದುವರಿದಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಕನಿಷ್ಠ ತಾಪಮಾನ 14 ರಿಂದ 15 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ವಿಶೇಷವಾಗಿ ಹೆಚ್‌ಎಎಲ್ ವ್ಯಾಪ್ತಿಯಲ್ಲಿ ನಿನ್ನೆ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಚಳಿ ಹಾಗೂ ಶೀತಗಾಳಿಯಿಂದಾಗಿ ಬೆಳಗ್ಗೆ ವಾಕಿಂಗ್‌ಗೆ ಹೋಗಲು ಸಹ ಜನರು ಹಿಂದೇಟು ಹಾಕುತ್ತಿದ್ದಾರೆ. ಡಿಸೆಂಬರ್ 15,16 ಮತ್ತು 17 ರಂದು ರಾಜ್ಯಾದ್ಯಂತ (Karnataka Weather) ಇದೇ ರೀತಿಯ ಚಳಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ಕಳೆದ ಹತ್ತು ವರ್ಷಗಳಲ್ಲಿ ದಾಖಲಾದ ಅತ್ಯಂತ ಕನಿಷ್ಠ ತಾಪಮಾನವಾಗಿದೆ.
ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9 ರಿಂದ 11 ಡಿಗ್ರಿ ಸೆಂಟಿಗ್ರೇಡ್ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸುಮಾರು 12 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ.
ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ ಹಾಗೂ ಶೀತಗಾಳಿ ಇರಲಿದೆ. ಇದು ವಯಸ್ಸಾದವರ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದರ ಜೊತೆಗೆ ಬೆಳೆ ವೈಪರಿತ್ಯವೂ ಉಂಟಾಗಲಿದೆ ಎಂದ ಹವಾಮಾನ ಇಲಾಖೆ ತಿಳಿಸಿದೆ. ಈ ಶೀತಗಾಳಿಯಿಂದ ಮನುಷ್ಯರು ತಮ್ಮನ್ನು ರಕ್ಷಿಸಿಕೊಳ್ಳಬೇಕು. ಬೆಚ್ಚಗಿನ ನೀರು, ಆಹಾರವನ್ನೇ ಸೇವಿಸಬೇಕು. ಇದರ ಜೊತೆಗೆ ಬೆಳೆಗಳನ್ನು ಸಂರಕ್ಷಿಸಲು ಹವಾಮಾನ ತಜ್ಞರು ಕೆಲವೊಂದಿಷ್ಟು ಸೂಚನೆಗಳನ್ನು ನೀಡಿದ್ದಾರೆ.
Karnataka Weather: ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು; ಕರ್ನಾಟಕದಲ್ಲಿ ನಾಳೆ ಹೇಗಿರಲಿದೆ ಹವಾಮಾನ?
ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಇದ್ದು, ಶೀತ ಗಾಳಿ ಬೀಸುತ್ತಿದೆ. ಘಂಟೆಗೆ 16 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಜನ ಬೆಚ್ಚನೆಯ ಸ್ವೆಟ್ಟರ್, ಕಿವಿಗೆ ಕ್ಯಾಪ್ ಧರಿಸಿ ಆರೋಗ್ಯ ಕಾಪಾಡಿಕೊಳ್ಳಲು ವಾಕಿಂಗ್ ಮಾಡ್ತಿದ್ದಾರೆ. ಡಿಸೆಂಬರ್‌ನಲ್ಲಿ 12 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತೆ ಅಂತ ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. 2016ರಲ್ಲಿ ಕನಿಷ್ಠ ತಾಪಮಾನ ದಾಖಲಾಗಿತ್ತು. ಈ ದಾಖಲೆಯ ಚಳಿ ಮತ್ತೆ ಡಿಸೆಂಬರ್‌ನಲ್ಲಿ ದಾಖಲಾಗುವ ಸಾಧ್ಯತೆಯಿದೆ.