Karnataka Budget 2025: ರಾಜ್ಯ ಆಯವ್ಯಯದ ಬಗ್ಗೆ ಸಂಪೂರ್ಣ ಮಾಹಿತಿ ಬೇಕೆ? ಬಜೆಟ್ ಕಾಪಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 16ನೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ದಾಖಲೆ 16ನೇ ಬಜೆಟ್‌ನಲ್ಲಿ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆಯವ್ಯಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಇನ್ನು ಈ ಬಜೆಟ್‌ನಲ್ಲಿ ಯಾವ್ಯಾವ ಕ್ಷೇತ್ರಗಳಿಗೆ, ಇಲಾಖೆಗಳಿಗೆ ಎಷ್ಟೆಷ್ಟು ಮೊತ್ತದ ಅನುದಾನ ಸಿಕ್ಕಿದೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
-
Rakshita Karkera
Mar 7, 2025 11:56 AM
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಇಂದು ತಮ್ಮ ದಾಖಲೆಯ 16ನೆ ಬಜೆಟ್ ಮಂಡನೆ(Karnataka Budget 2025) ಆರಂಭಿಸಿದ್ದಾರೆ. ಸದ್ಯ ಸಿಎಂ ಮಂಡಿನೋವಿನಿಂದ ಬಳಲುತ್ತಿದ್ದು, ಕುಳಿತುಕೊಂಡೇ ಬಜೆಟ್ ಭಾಷಣ ಮಾಡುತ್ತಿದ್ದಾರೆ. ಆಯವ್ಯಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಅನ್ನು "ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ಕರ್ನಾಟಕ ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ" ಎಂದು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಈ ಬಾರಿಯ ಬಜೆಟ್‌ನಲ್ಲಿ ಯಾವ್ಯಾವ ಕ್ಷೇತ್ರಗಳಿಗೆ, ಇಲಾಖೆಗಳಿಗೆ ಎಷ್ಟೆಷ್ಟು ಮೊತ್ತದ ಅನುದಾನ ಸಿಕ್ಕಿದೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಈ ಬಾರಿಯ ಬಜೆಟ್ ಕಾಪಿಗೆ ಇಲ್ಲಿ ಕ್ಲಿಕ್ ಮಾಡಿ.