ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಇಂದು ತಮ್ಮ ದಾಖಲೆಯ 16ನೆ ಬಜೆಟ್ ಮಂಡನೆ(Karnataka Budget 2025) ಆರಂಭಿಸಿದ್ದಾರೆ. ಸದ್ಯ ಸಿಎಂ ಮಂಡಿನೋವಿನಿಂದ ಬಳಲುತ್ತಿದ್ದು, ಕುಳಿತುಕೊಂಡೇ ಬಜೆಟ್ ಭಾಷಣ ಮಾಡುತ್ತಿದ್ದಾರೆ. ಆಯವ್ಯಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಅನ್ನು "ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ಕರ್ನಾಟಕ ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ" ಎಂದು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಈ ಬಾರಿಯ ಬಜೆಟ್‌ನಲ್ಲಿ ಯಾವ್ಯಾವ ಕ್ಷೇತ್ರಗಳಿಗೆ, ಇಲಾಖೆಗಳಿಗೆ ಎಷ್ಟೆಷ್ಟು ಮೊತ್ತದ ಅನುದಾನ ಸಿಕ್ಕಿದೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಈ ಬಾರಿಯ ಬಜೆಟ್ ಕಾಪಿಗೆ ಇಲ್ಲಿ ಕ್ಲಿಕ್ ಮಾಡಿ.