ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Menstrual Leave Eligibility: ಮಹಿಳೆಯರಿಗೆ ಮಾಸಿಕ 1 ದಿನ ಋತುಚಕ್ರ ರಜೆ, ಷರತ್ತುಗಳು ಅನ್ವಯ

Karnatka Menstrual Leave Policy 2025: ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ. ಪ್ರತಿ ತಿಂಗಳು ಒಂದು ದಿನದ ʼಋತುಚಕ್ರ ರಜೆʼ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ. ಖಾಯಂ, ಗುತ್ತಿಗೆ, ಹೊರಗುತ್ತಿಗೆ ಎಲ್ಲಾ ಮಾದರಿಯ ಆಧಾರದಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಇದು ಅನ್ವಯವಾಗಲಿದೆ.

ಕರ್ನಾಟಕದಲ್ಲಿ ಮಾಸಿಕ ಋತುಚಕ್ರ ರಜೆ ಜಾರಿ

ಬೆಂಗಳೂರು, ನ.13: ಮಹಿಳಾ ನೌಕರರಿಗೆ ರಾಜ್ಯ ಸರ್ಕಾರ (Karnataka government) ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ನೀತಿ 2025ಕ್ಕೆ (Menstrual Leave Policy, 2025) ಅ.9ರಂದು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಸಂಬಂಧ ಬುಧವಾರ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ವಾರ್ಷಿಕವಾಗಿ 12 ದಿನಗಳ ರಜೆ ನೀಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಇದಕ್ಕೆ ಅರ್ಹತೆ, ಷರತ್ತುಗಳನ್ನೂ (Menstrual Leave Eligibility) ನಿಗದಿಪಡಿಸಿ ಸೂಚನೆ ನೀಡಿದೆ.

ತಿಂಗಳಿಗೆ ಒಂದು ಋತುಚಕ್ರದ ರಜೆ

ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾ‌ರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ ತಿಂಗಳಿಗೆ ಒಂದು ರಜೆ ನೀಡಲಾಗ್ತಿದೆ.

ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Menstrual Leave Policy: ಮಹಿಳಾ ನೌಕರರಿಗೆ ಗುಡ್‌ ನ್ಯೂಸ್‌; ಮಾಸಿಕ ಒಂದು ಋತುಚಕ್ರ ರಜೆ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ

ಷರತ್ತುಗಳು ಬದ್ಧ ರಜೆ

ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ. ಪ್ರತಿ ತಿಂಗಳು ಒಂದು ದಿನದ ʼಋತುಚಕ್ರ ರಜೆʼ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ. ಖಾಯಂ, ಗುತ್ತಿಗೆ, ಹೊರಗುತ್ತಿಗೆ ಎಲ್ಲಾ ಮಾದರಿಯ ಆಧಾರದಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಇದು ಅನ್ವಯವಾಗಲಿದೆ. ವೇತನ ಸಹಿತ ರಜೆ ನೀಡುವಂತೆ ಸಂಸ್ಥೆ, ಕಂಪನಿಗಳು, ಕಾರ್ಖಾನೆಗಳಿಗೆ ಸರ್ಕಾರದ ಸೂಚನೆ ನೀಡಿದೆ.

ಸಚಿವ ಸಂಪುಟದಲ್ಲಿ ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, MNC ಗಳು, IT ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ಋತುಚಕ್ರ ರಜೆ ನೀತಿ 2025 ಅನ್ನು ಜಾರಿಗೆ ತರಲು ಸಚಿವ ಸಂಪುಟವು ಅನುಮೋದಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಋತುಚಕ್ರ ರಜೆ ಸೌಲಭ್ಯ ಜಾರಿಗೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದ್ದು, ಮಹಿಳಾ ನೌಕರರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Menstrual leave: ಮಹಿಳಾ ಉದ್ಯೋಗಿಗಳಿಗೆ ವರ್ಷಕ್ಕೆ 12 ದಿನ ಋತುಚಕ್ರ ರಜೆ; ಕ್ಯಾಬಿನೆಟ್ ಅನುಮೋದನೆ

ಹರೀಶ್‌ ಕೇರ

View all posts by this author