KCET Results 2025: ನಾಳೆ ಬೆಳಗ್ಗೆ ಸಿಇಟಿ ಫಲಿತಾಂಶ ಪ್ರಕಟ; ಈ ರೀತಿ ರಿಸಲ್ಟ್ ಚೆಕ್ ಮಾಡಿ
KCET Results 2025: ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 15, 16, 17ರಂದು ಒಟ್ಟು 775 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿತ್ತು. ಕರ್ನಾಟಕದಲ್ಲಿ ಎಂಜಿನಿಯರಿಂಗ್, ಫಾರ್ಮಸಿ ಮತ್ತು ಕೃಷಿ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಫಲಿತಾಂಶ ನಿರ್ಣಾಯಕವಾಗಿದೆ.


ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2025ರ (KCET Results 2025) ಫಲಿತಾಂಶ ಮೇ 24 ರಂದು ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ಶನಿವಾರ ಬೆಳಗ್ಗೆ 11:30ಕ್ಕೆ ಫಲಿತಾಂಶ ಪ್ರಕಟ ಮಾಡಲಿದ್ದು, ಅಭ್ಯರ್ಥಿಗಳು ಮಧ್ಯಾಹ್ನ 2 ಗಂಟೆಗೆ ಕೆಇಎ ವೆಬ್‌ಸೈಟ್‌ನಲ್ಲಿ cetonline.karnataka.gov.in ಫಲಿತಾಂಶ ವೀಕ್ಷಿಸಬಹುದಾಗಿದೆ.
ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 15, 16, 17ರಂದು ಒಟ್ಟು 775 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿತ್ತು. ಕರ್ನಾಟಕದಲ್ಲಿ ಎಂಜಿನಿಯರಿಂಗ್, ಫಾರ್ಮಸಿ ಮತ್ತು ಕೃಷಿ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ನಿರ್ಣಾಯಕವಾಗಿದೆ. ಸಿಇಟಿ ಫಲಿತಾಂಶ ಘೋಷಣೆಯ ನಂತರ KEA ಮೆರಿಟ್ ಲಿಸ್ಟ್ ಪ್ರಕಟಿಸುತ್ತದೆ. ನಂತರ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಿ, ಸೀಟು ಹಂಚಿಕೆ ಮಾಡಲಾಗುತ್ತದೆ.
ಸಿಇಟಿ ಫಲಿತಾಂಶ ಪರಿಶೀಲಿಸುವುದು ಹೇಗೆ?
- ಕೆಇಎ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea ಅಥವಾ https://karresults.nic.in/ ಭೇಟಿ ನೀಡಿ
- ಮುಖಪುಟದಲ್ಲಿ ಪ್ರವೇಶ ಕೆಟಗರಿಯಲ್ಲಿ KCET ಲಿಂಕ್ ಮೇಲೆ ಕ್ಲಿಕ್ ಮಾಡಬೇಕು
- ಬಳಿಕ ಹೆಸರಿನ ಮೊದಲ ನಾಲ್ಕು ಅಕ್ಷರಗಳೊಂದಿಗೆ, KCET ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.
- ನಂತರ KCET ಫಲಿತಾಂಶ ಲಭ್ಯವಾಗಲಿದ್ದು, ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್‌ಔಟ್ ತೆಗೆದಿಟ್ಟುಕೊಳ್ಳಬಹುದು.