Milk Price Hike: ನಂದಿನಿ ಹಾಲಿಗೆ 3 ರೂ. ಏರಿಕೆ? ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಬೇಡಿಕೆ ಸಲ್ಲಿಸಿವೆ. ಪಶು ಆಹಾರ, ಮೇವು, ಕೂಲಿ ಸೇರಿದಂತೆ ಎಲ್ಲ ಖರ್ಚುಗಳೂ ಹೆಚ್ಚಾಗಿವೆ. ಲಾಭಾಂಶ ಕಡಿಮೆಯಾಗಿದ್ದು, ರೈತರಿಗೆ ಹೆಚ್ಚಿನ ಪಾಲು ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಹೀಗಾಗಿ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.


ಬೆಂಗಳೂರು: ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ (Milk Price Hike) ಮಾಡುವಂತೆ ಕೆಎಂಎಫ್ (KMF) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ನಂದಿನಿ ಹಾಲಿನ (Nandini milk) ದರ ಏರಿಕೆ ನಿರ್ಧಾರವಾಗಲಿದೆ. ಇತ್ತೀಚೆಗೆ ತಾನೇ ಬಸ್ ಟಿಕೆಟ್ ದರ, ಮೆಟ್ರೋ ಪ್ರಯಾಣ ದರ, ವಿದ್ಯುತ್ ದರ ಏರಿಕೆಯಿಂದ ತತ್ತರಿಸಿರುವ ಜನ ಇದೀಗ ಮತ್ತೊಂದು ಶಾಕ್‌ಗೆ ಸಿದ್ಧರಾಗಬೇಕಾಗಿದೆ.
ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಬೇಡಿಕೆ ಸಲ್ಲಿಸಿವೆ. ಪಶು ಆಹಾರ, ಮೇವು, ಕೂಲಿ ಸೇರಿದಂತೆ ಎಲ್ಲ ಖರ್ಚುಗಳೂ ಹೆಚ್ಚಾಗಿವೆ. ಲಾಭಾಂಶ ಕಡಿಮೆಯಾಗಿದ್ದು, ರೈತರಿಗೆ ಹೆಚ್ಚಿನ ಪಾಲು ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಹೀಗಾಗಿ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಈಗಾಗಲೇ ಸರಕಾರ ಕೆಎಸ್ಆರ್ಟಿಸಿ ಬಸ್, ಮೆಟ್ರೋ ಟಿಕೆಟ್ ಪ್ರಯಾಣದ ದರ ಹಾಗೂ ವಿದ್ಯುತ್ ದರ ಏರಿಕೆ ಮಾಡಿ ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಗಾಯದ ಮೇಲೆ ಬರೆ ಎಳೆಯುವಂತೆ ಇದೀಗ ಮತ್ತೆ ದರ ಏರಿಕೆಯ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಮಾಡಲು ನಿರ್ಧರಿಸಲಾಗಿದೆ. ರಿಕ್ಷಾ ಪ್ರಯಾಣದ ದರ ಕೂಡ ಏರಿಕೆ ಮಾಡುವಂತೆ ರಿಕ್ಷಾ ಚಾಲಕ ಮಾಲೀಕರು ಇತ್ತೀಚೆಗೆ ಒತ್ತಾಯಿಸಿದ್ದಾರೆ.
ಇಂದಿನಿಂದ ನಂದಿ ಗಿರಿಧಾಮ ಒಂದು ತಿಂಗಳು ಬಂದ್
ಚಿಕ್ಕಬಳ್ಳಾಪುರ: ಜಿಲ್ಲೆಯ (chikkaballapuara) ವಿಶ್ವವಿಖ್ಯಾತ ನಂದಿ ಗಿರಿಧಾಮವನ್ನು (Nandi hills) ನವೀಕರಣ ಕಾಮಗಾರಿಯ (renovation) ಹಿನ್ನೆಲೆಯಲ್ಲಿ ಇಂದಿನಿಂದ ಒಂದು ತಿಂಗಳುಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು, ನಂದಿ ಗಿರಿಧಾಮದಲ್ಲಿ ರಸ್ತೆ ಡಾಮರೀಕರಣ ಕಾಮಗಾರಿ ಸೇರಿದಂತೆ ಇತರೆ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್.24ರ ಇಂದಿನಿಂದ ಏಪ್ರಿಲ್ 25ರವರೆಗೆ ಒಂದು ತಿಂಗಳವರೆಗೆ ಬಂದ್ ಮಾಡಲಾಗುತ್ತಿದೆ ಎಂದಿದ್ದಾರೆ.
ಪ್ರವಾಸಿಗರ ಹಿತದೃಷ್ಟಿಯಿಂದ ವೀಕೆಂಡ್ ಶುಕ್ರವಾರ ಸಂಜೆ 6.30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಮಾತ್ರವೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಇನ್ನುಳಿದಂತೆ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರದಂದು ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಾರಾಂತ್ಯದ ದಿನವಾದ ಶುಕ್ರವಾರ ಸಂಜೆ 6:30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆ ವರೆಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉಳಿದಂತೆ ವಾರದ 5 ದಿನಗಳು ಸಂಚಾರಕ್ಕೆ ಸಂಪೂರ್ಣ ನಿರ್ಬಂಧಿಸಲಾಗಿದೆ. ಮಾರ್ಚ್ 24ರ ಇಂದಿನಿಂದ ಏಪ್ರಿಲ್ 25ರ ವರೆಗೂ 1 ತಿಂಗಳು 4 ವಾರಗಳ ಕಾಲ ನಿರ್ಬಂಧ ಜಾರಿಯಲ್ಲಿ ಇರಲಿದೆ. ನಂದಿಬೆಟ್ಟದ ತಪ್ಪಲಿನಿಂದ ಬೆಟ್ಟದವರೆಗೂ 7.70 ಕಿಲೋಮೀಟರ್ ದೂರದ ರಸ್ತೆ ಡಾಮರೀಕರಣ ಕಾಮಗಾರಿ ನಡೆಯಲಿದೆ ಎಂದು ಆದೇಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: Electricity Price Hike: ವಿದ್ಯುತ್ ಗ್ರಾಹಕರಿಗೆ ಶಾಕ್, ಕೆಇಆರ್‌ಸಿಯಿಂದ ದರ ಏರಿಕೆ