Nandini products: ನಂದಿನಿ ಗ್ರಾಹಕರಿಗೆ ಸಿಹಿ ಸುದ್ದಿ! ಮೊಸರು, ತುಪ್ಪ, ಬೆಣ್ಣೆ ಬೆಲೆ ಇಳಿಕೆ ಸಾಧ್ಯತೆ
KMF: ಜಿಎಸ್‌ಟಿ (GST) ಕಡಿತಗೊಳಿಸುವ ಮೂಲಕ ಕೇಂದ್ರ ಸರ್ಕಾರ ಮಧ್ಯಮ ವರ್ಗದವರ ಹೊರೆ ಕಡಿಮೆ ಮಾಡಿದ್ದು ಇದರ ನಡುವೆಯೇ ನಂದಿನಿ ಉತ್ಪನ್ನಗಳ ಬೆಲೆ ಕೂಡ ಇಳಿಕೆಯಾಗುವ ಸಾಧ್ಯತೆ ಇದೆ. ಆಹಾರ ಉತ್ಪನ್ನಗಳ ಮೇಲಿನ GSTಯನ್ನು ಶೇ 12ರಿಂದ 5ಕ್ಕೆ ಇಳಿಕೆ ಮಾಡುವ ಸಾಧ್ಯತೆ ಇದೆ.

-

ಬೆಂಗಳೂರು: ಬೆಲೆ ಏರಿಕೆ (Price Hike) ಸುದ್ದಿಗಳ ನಡುವೆ ಕರ್ನಾಟಕ ಹೆಮ್ಮೆಯ ಸಂಸ್ಥೆ ಕೆಎಂಎಫ್ (KMF) ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ನಂದಿನಿ ಉತ್ಪನ್ನಗಳ (Nandini products) ಬೆಲೆ ಇಳಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ದರ ಇಳಿಕೆ ಸಂಬಂಧ ಕೆಎಂಎಫ್‌ನ ಹಿರಿಯ ಅಧಿಕಾರಿಗಳ ಜೊತೆ ಇಂದು ಮಹತ್ವದ ಸಭೆ ಕೂಡ ನಡೆಯಲಿದೆ.
ಜಿಎಸ್‌ಟಿ (GST) ಕಡಿತಗೊಳಿಸುವ ಮೂಲಕ ಕೇಂದ್ರ ಸರ್ಕಾರ ಮಧ್ಯಮ ವರ್ಗದವರ ಹೊರೆ ಕಡಿಮೆ ಮಾಡಿದ್ದು ಇದರ ನಡುವೆಯೇ ನಂದಿನಿ ಉತ್ಪನ್ನಗಳ ಬೆಲೆ ಕೂಡ ಇಳಿಕೆಯಾಗುವ ಸಾಧ್ಯತೆ ಇದೆ. ಆಹಾರ ಉತ್ಪನ್ನಗಳ ಮೇಲಿನ GSTಯನ್ನು ಶೇ 12ರಿಂದ 5ಕ್ಕೆ ಇಳಿಕೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ 'ನಂದಿನಿ'ಯ ವಿವಿಧ ಉತ್ಪನ್ನಗಳ ದರ ಇಳಿಕೆಯಾಗಲಿದೆ ಎನ್ನಲಾಗುತ್ತಿದೆ. ಕೇಂದ್ರ ಸರ್ಕಾರದ ನಡೆಯ ಪರಿಣಾಮ ಕೆಎಂಎಫ್ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ ಸಾಧ್ಯತೆಯಿದೆ.
ಮೊಸರು 4 ರೂ. ಇಳಿಕೆ ಸಾಧ್ಯತೆ
ಮೊಸರಿನ ದರ ಲೀಟರ್‌ಗೆ 4 ರೂಪಾಯಿ ವರೆಗೆ ಕಡಿಮೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಧಿಕಾರಿಗಳ ಜೊತೆ ಸಭೆ ಬಳಿಕ ನಿರ್ಧಾರ ತೆಗೆದುಕೊಳ್ಳಲಿದ್ದು, ಸೋಮವಾರದಿಂದಲೇ ಪರಿಷ್ಕೃತ ದರ ಜಾರಿಗೊಳಿಸುವಂತೆ ಮಾರಾಟಗಾರರಿಗೆ ಸೂಚನೆ ನೀಡುವ ಸಾಧ್ಯತೆ ಇದೆ. ಸೆ.22ರಿಂದಲೇ ನಂದಿನಿ ಉತ್ಪನ್ನಗಳ ದರ ಶೇ 7ರಷ್ಟು ಕಡಿಮೆಯಾಗಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಮಾಹಿತಿ ನೀಡಿದ್ದಾರೆ. ಇಂದು ನಡೆಯುವ ಸಭೆಯ ಬಳಿಕ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್‌ಟಿ ಜಾರಿಗೊಳಿಸಲಾಗಿತ್ತು. ಇದಾದ ಬಳಿಕ 2022ರಲ್ಲಿ ಜಿಎಸ್‌ಟಿಯನ್ನು ಶೇ 12ಕ್ಕೆ ಹೆಚ್ಚಿಸಲಾಗಿತ್ತು. ಈಗ ತೆರಿಗೆ ದರ ಕಡಿಮೆ ಮಾಡಿರುವುದರಿಂದ ಗ್ರಾಹಕರಿಗೆ ಸ್ವಲ್ಪ ಮಟ್ಟಿಗೆ ಹೊರೆ ಕಡಿಮೆಯಾಗಬಹುದು.
ಇದನ್ನೂ ಓದಿ: ಫ್ಲೋರಿಡಾದಲ್ಲಿ 'ನಂದಿನಿ ತುಪ್ಪ ಮತ್ತು ಸಿಹಿ ಉತ್ಪನ್ನಗಳ ಮಾರುಕಟ್ಟೆಗೆ ಬಿಡುಗಡೆ