ಕೊಡಗು, ಫೆ.28: ಹಿಂದೂ ಕಾರ್ಯಕರ್ತನ (Hindu activist) ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಕೊಡಗು (Kodagu) ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆದಿದೆ. ಇಂದು ಬಲ್ಲಮವಟ್ಟಿ ಎಂಬ ಗ್ರಾಮದಲ್ಲಿ ಹಿಂದೂ ಸಂಗಮ (Hindu Sangama) ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮೈಕ್ ತೆಗೆದುಕೊಂಡು ಹೋಗುತ್ತಿದ್ದ ಗೌತಮ್ ಎಂಬಾತನ ಮೇಲೆ ಮುಸ್ಲಿಂ ಯುವಕರು ಹಲ್ಲೆ (Assault case) ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಘಟನೆ ಸಂಬಂಧ ಓರ್ವನನ್ನು ಬಂಧಿಸಿದ್ದು, ಮೂವರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಗೌತಮ್‌ನನ್ನು ಮಡಿಕೇರಿ (Madikeri) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳ ಶೀಘ್ರ ಬಂಧನಕ್ಕೆ ಹಿಂದೂ ಪರ ಸಂಘಟನೆಗಳು (Hindu Organizations) ಆಗ್ರಹಿಸಿವೆ. ನಾಪೋಕ್ಲು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ರಾಶೀದ್ ಸಿದ್ದಿಕ್, ಸುಹೇಲ್ ಹಾಗೂ ನಾಫಿ ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಾಲ್ವರ ಪೈಕಿ ಸುಹೇಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಹಿಂದೂ ಸಂಗಮ ಕಾರ್ಯಕ್ರಮದ ಅನೌನ್ಸ್‌ಮೆಂಟ್‌ಗೆ ಸ್ಪೀಕರ್ ತೆಗೆದುಕೊಂಡು ಹಿಂದೂ ಕಾರ್ಯಕರ್ತರು ಹೋಗುತ್ತಿದ್ದರು. ಈ ವೇಳೆ ಮುಸ್ಲಿಂ ಯುವಕರು ಗೌತಮ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆ ಮಾಡಿದ ಆರೋಪಿಗಳು ಸ್ಥಳೀಯ ಕಾಂಗ್ರೆಸ್‌ನ ಪ್ರಭಾವಿ ನಾಯಕರ ಮಕ್ಕಳು ಎನ್ನಲಾಗಿದೆ. ಅರೋಪಿಗಳನ್ನು ಬಂಧಿಸುವಂತೆ ಹಿಂದೂ ಸಂಘಟನೆಗಳ ಒತ್ತಾಯಿಸಿ, ಆಕ್ರೋಶ ವ್ಯಕ್ತಪಡಿಸಿದವು.
Kidnap case: ಕನ್ನಡದ ನಿರ್ದೇಶಕನ ಕಿಡ್ನಾಪ್, ಹಲ್ಲೆ; ನಟಿ ಐಶ್ವರ್ಯಾ ಸೇರಿ 11 ಮಂದಿ ಆರೆಸ್ಟ್
ಸ್ಥಳದಲ್ಲಿ ಹಿಂದೂ ಕಾರ್ಯಕರ್ತರ ಜಮಾವಣೆ
ಥಳಿತದ ವೇಳೆ ಹಿಂದೂ ಕಾರ್ಯಕರ್ತ ಗೌತಮ್‌ಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ನಾಯಕರು ಜಮಾಯಿಸಿದರು. ಆರೋಪಿಗಳನ್ನು ಕೂಡಲೆ ಬಂಧಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ರು.
ಸ್ಥಳಕ್ಕೆ ಮಾಜಿ ಸ್ಪೀಕರ್, ಬಿಜೆಪಿ ನಾಯಕ ಕೆಜಿ ಬೋಪಯ್ಯ ಹಾಗೂ ರಾಜಕೀಯ ನಾಯಕರು ಭೇಟಿ ನೀಡಿದ್ರು. ಸ್ಥಳದಲ್ಲೆ ದೂರು ನೀಡಿ ಕ್ರಮಕ್ಕೆ ಕಾರ್ಯಕರ್ತರು ಆಗ್ರಹಿಸಿದರು. ನಾಲ್ವರ ವಿರುದ್ಧ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.