ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Cauvery Theerthodbhava: ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ

ಕಾವೇರಿ ತೀರ್ಥೋದ್ಭವವು ಕೊಡಗಿನ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳಲ್ಲಿ ಒಂದಾಗಿದ್ದು, ಪ್ರತಿ ವರ್ಷ ಸಾವಿರಾರು ಭಕ್ತರು ಭಾಗವಹಿಸುತ್ತಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾಡಿದ್ದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುದಾನ ಬಿಡುಗಡೆಗೆ ಸೂಚನೆ ನೀಡಿದ್ದಾರೆ.

ಮಡಿಕೇರಿ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಅಕ್ಟೋಬರ್ 17ರಂದು ನಡೆಯಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ (Cauvery Theerthodbhava) ಆಚರಣೆಗೆ 2 ಕೋಟಿ ರೂ. ಅನುದಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಾವೇರಿ ನೀರಾವರಿ ನಿಗಮದ ಮೂಲಕ ಈ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾಡಿದ್ದ ಮನವಿಗೆ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅವರು ಅನುದಾನ ಬಿಡುಗಡೆಗೆ ಸೂಚನೆ ನೀಡಿದ್ದಾರೆ. ಕಾವೇರಿ ತೀರ್ಥೋದ್ಭವವು ಕೊಡಗಿನ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳಲ್ಲಿ ಒಂದಾಗಿದ್ದು, ಪ್ರತಿ ವರ್ಷ ಸಾವಿರಾರು ಭಕ್ತರು ಭಾಗವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಆಚರಣೆಯ ಸಿದ್ಧತೆಗಳು ಹಾಗೂ ಅಗತ್ಯ ಮೂಲಸೌಕರ್ಯಗಳಿಗಾಗಿ ಸರ್ಕಾರದಿಂದ 2 ಕೋಟಿ ರೂ. ಅನುದಾನ ನೀಡಲಾಗುತ್ತಿದೆ.

Cauvery Water Dispute: ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ನಿತ್ಯ 9000 ಕ್ಯೂಸೆಕ್ ಕಾವೇರಿ ನೀರು ಹರಿಸಲು CWRC ಶಿಫಾರಸು

ಗೋಣಿಕೊಪ್ಪ ದಸರಾಗೂ ಹೆಚ್ಚುವರಿ ಅನುದಾನ:

ಇದೇ ವೇಳೆ ಗೋಣಿಕೊಪ್ಪ ದಸರಾ ಉತ್ಸವಕ್ಕೂ ಸರ್ಕಾರ ಹೆಚ್ಚುವರಿ ಅನುದಾನ ಘೋಷಿಸಿದೆ. ಕಳೆದ ಬಾರಿ ಗೋಣಿಕೊಪ್ಪ ದಸರಾ ಉತ್ಸವಕ್ಕೆ 75 ಲಕ್ಷ ರೂ. ಅನುದಾನ ನೀಡಲಾಗಿತ್ತು. ಈ ಬಾರಿ ಹೆಚ್ಚುವರಿಯಾಗಿ 25 ಲಕ್ಷ ರೂ. ಅನುದಾನ ನೀಡಲು ಸರ್ಕಾರ ನಿರ್ಧರಿಸಿದೆ.

ತೀರ್ಥ ರೂಪದಲ್ಲಿ ದರ್ಶನ ನೀಡುವ ಕಾವೇರಿ ತಾಯಿ

ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ಜೀವ ನದಿಯನ್ನು ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುತ್ತಾರೆ.

ತಲಕಾವೇರಿಯಲ್ಲಿನ ಕುಂಡಿಕೆಯಲ್ಲಿ ಪ್ರತಿ ವರ್ಷ ಕಾವೇರಿ ತೀರ್ಥ ರೂಪದಲ್ಲಿ ದರ್ಶನ ನೀಡುತ್ತಾಳೆ ಎನ್ನುವುದು ಪುರಾತನ ಕಾಲದಿಂದಲೂ ಇರುವ ನಂಬಿಕೆ. ಈ ಸಂದರ್ಭ ಸಹಸ್ರಾರು ಭಕ್ತರು ತೀರ್ಥರೂಪಿಣಿ ಕಾವೇರಿ ತಾಯಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಕೇವಲ ಕೊಡಗು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆ ಹಾಗೂ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಆಗಮಿಸಿ ಇಲ್ಲಿಂದ ತೀರ್ಥ ಕೊಂಡೊಯ್ಯುತ್ತಾರೆ. ಇಲ್ಲಿನ ಪುಟ್ಟ ಕುಂಡಿಕೆಯಲ್ಲಿನ ಕಾವೇರಿ ಜಲವನ್ನು ತೀರ್ಥವೆಂದು ನಂಬಿ ಪೂಜಿಸುವುದಲ್ಲದೆ, ಮನೆಗೆ ಕೊಂಡೊಯ್ಯುತ್ತಾರೆ. ಈ ಕುಂಡಿಕೆಯನ್ನು ಭಕ್ತಿ ಭಾವದಿಂದ ಕಾಣುತ್ತಾರೆ. ನಿತ್ಯ ಇಲ್ಲಿ ಪೂಜೆ ನಡೆಯುತ್ತದೆ.