ತಲಕಾವೇರಿಯಲ್ಲಿ ಸಿಎಂ 16ರಂದು ವಿಶೇಷ ಪೂಜೆ
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಆ.16ರಂದು ಬೆಳಗ್ಗೆ 11 ಗಂಟೆಗೆ ಭಾಗ ಮಂಡಲ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ ಭಾಗಮಂಡಲದ ಭಗಂ ಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ತಲಕಾವೇರಿಗೆ ತೆರಳಿ ಕಾವೇರಿ ತಾಯಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ.
-
ಮಡಿಕೇರಿ: ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಆ.16ರಂದು ಬೆಳಗ್ಗೆ 11 ಗಂಟೆಗೆ ಭಾಗ ಮಂಡಲ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ ಭಾಗಮಂಡಲದ ಭಗಂ ಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ತಲಕಾವೇರಿಗೆ ತೆರಳಿ ಕಾವೇರಿ ತಾಯಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.
ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಕುರಿತು ಕಾರ್ಯಕ್ರಮದ ವಿವರವನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯ ದರ್ಶಿ ಎ.ಎಸ್.ಪೊನ್ನಣ್ಣ ಹಂಚಿಕೊಂಡಿದ್ದಾರೆ.
ಕಳೆದ ವರ್ಷದ ಮಾರ್ಚ್ 21ರಂದು ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಡಿ.ಕೆ.ಶಿವಕುಮಾರ್ ಅವರು ತಲಕಾವೇರಿಗೆ ಭೇಟಿ ನೀಡಿ, ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲಿಂದ ಪವಿತ್ರ ಕಾವೇರಿ ತೀರ್ಥವನ್ನು ಬೆಂಗಳೂರಿಗೆ ಕೊಂಡೊಯ್ದು ಕಾವೇರಿ ಆರತಿಯಲ್ಲಿ ಬಳಸಲಾಗಿತ್ತು. ಇದೀಗ ಮುಖ್ಯಮಂತ್ರಿಯಾದ ಬಳಿಕ ಮತ್ತೊಮ್ಮೆ ಕಾವೇರಿ ನಾಡಿಗೆ ಆಗಮಿಸುತ್ತಿರುವುದು ಜಿಲ್ಲೆಯ ಜನರಲ್ಲಿ ವಿಶೇಷ ಕುತೂಹಲ ಮೂಡಿಸಿದೆ