ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಚಲಿಸುತ್ತಿದ್ದ ಬಸ್‌ನಲ್ಲಿ ಚಾಲಕನಿಗೆ ಹೃದಯಾಘಾತ; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಚಲಿಸುತ್ತಿದ್ದ ಬಸ್‌ನಲ್ಲಿ ಚಾಲಕನಿಗೆ ಹೃದಯಾಘಾತವಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕಕ್ಕೆ ವಾಲಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಚಲಿಸುತ್ತಿದ್ದ ಬಸ್‌ನಲ್ಲಿ ಚಾಲಕನಿಗೆ (Madikeri News) ಹೃದಯಾಘಾತವಾದ (Heart Attack) ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕಕ್ಕೆ ವಾಲಿದೆ. ಆದರೆ ಯಾವುದೇ ಅನಾಹುತ ಸಂಭವಿಸಿಲ್ಲ. ಚಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣವೇ ಮಡಿಕೇರಿ ಬಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೃದಯಘಾತವಾಗುತ್ತಿದ್ದಂತೆ ಬಸ್ ಚಾಲಕನ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದ್ದಾನೆ. ಆದರೆ ಬಸ್‌ ನಿಯಂತ್ರಣ ಕಳೆದುಕೊಂಡಿದೆ. ಬಸ್ ಚರಂಡಿಯತ್ತ ಇಳಿಸಿದ್ದಾನೆ. ಇದರಿಂದ ಬಸ್ ವಾಲಿಕೊಂಡು ನಿಂತಿದೆ. ಸದ್ಯ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಸಮೀಪದ ಪೊನ್ನಾಚಿ ಕ್ರಾಸ್ ಬಳಿ ಕಳೆದ ವಾರ ನಡೆದಿತ್ತು. ಮೈಸೂರು ಡಿಪೋದಿಂದ ಬಂದ ಬಸ್, ಬುದ್ಧ ಪೂರ್ಣಿಮಾ ಪೂಜೆಗೆ ಬೆಟ್ಟಕ್ಕೆ ಭೇಟಿ ನೀಡಿದ್ದ ಭಕ್ತರನ್ನು ಹನೂರಿಗೆ ಕರೆದೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಬಸ್ 50 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ವರದಿಯಾಗಿದೆ ಮತ್ತು ಗಾಯಾಳುಗಳನ್ನು ಹನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

RB Choudary: ರಸ್ತೆ ಅಪಘಾತದಲ್ಲಿ ಖ್ಯಾತ ನಿರ್ಮಾಪಕ ಆರ್‌. ಬಿ ಚೌಧರಿ ನಿಧನ; ರಜನಿಕಾಂತ್, ಪವನ್ ಕಲ್ಯಾಣ್, ಚಿರಂಜೀವಿ ಕಂಬನಿ

ಮಲೆ ಮಹದೇಶ್ವರ ಬೆಟ್ಟ ಮತ್ತು ತಾಳುಬೆಟ್ಟದ ನಡುವಿನ ಕಿರಿದಾದ ಘಾಟ್ ರಸ್ತೆಯಲ್ಲಿ ತಿರುವು ಪಡೆಯುವ ಸಮಯದಲ್ಲಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್ ಉರುಳಿಬಿದ್ದಿದೆ. ಸ್ಥಳೀಯ ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತದ ಪರಿಣಾಮ ದೇವಾಲಯದತ್ತ ಸಾಗುತ್ತಿದ್ದ ವಾಹನ ಸಂಚಾರ ಹಲವು ಗಂಟೆಗಳ ಕಾಲ ಅಸ್ತವ್ಯಸ್ತಗೊಂಡಿತು. ಭಕ್ತರನ್ನು ಹೊತ್ತ ನೂರಾರು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡು ಟ್ರಾಫಿಕ್ ಜಾಮ್ ಉಂಟಾಯಿತು. ನಂತರ ಕ್ರೇನ್ ಸಹಾಯದಿಂದ ಬಸ್ ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು.

Vishakha Bhat Heggar

View all posts by this author