ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಾರ್ತಾಂಡನನ್ನು ಕೊಂದ ಕಂಜನ್ ಆನೆಗೆ ದಸರಾದಿಂದ ಶಾಶ್ವತ ನಿಷೇಧ

ದುಬಾರೆ ಆನೆ ಶಿಬಿರದಲ್ಲಿ ಮಾರ್ತಾಂಡ ಆನೆ ಸಾವಿಗೆ ಕಾರಣವಾದ ಕಂಜನ್ ಆನೆಯನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಿಂದ ಶಾಶ್ವತವಾಗಿ ನಿಷೇಧಿಸಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಕಟ್ಟುನಿಟ್ಟಿನ ಆದೇಶದ ಮೇರೆಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಸಂಗ್ರಹ ಚಿತ್ರ

ಕೊಡಗು: ದುಬಾರೆ ಆನೆ ಶಿಬಿರದಲ್ಲಿ ಮಾರ್ತಾಂಡ ಆನೆ ಸಾವಿಗೆ ಕಾರಣವಾದ ಕಂಜನ್ ಆನೆಯನ್ನು (Kanjan Elephant) ವಿಶ್ವವಿಖ್ಯಾತ ಮೈಸೂರು ದಸರಾ (Mysore Dussehra) ಮಹೋತ್ಸವದಿಂದ ಶಾಶ್ವತವಾಗಿ ನಿಷೇಧಿಸಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಕಟ್ಟುನಿಟ್ಟಿನ ಆದೇಶದ ಮೇರೆಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಕಂಜನ್ ಆನೆಯ ಆಕ್ರಮಣಕಾರಿ ನಡವಳಿಕೆಯಿಂದಾಗಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮುಂಬರುವ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳಿಂದ ಕಂಜನ್ ಆನೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಉನ್ನತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಕಂಜನ್ ಆನೆಯ ಮೊಂಡಾಟ ಇದೇ ಮೊದಲೇನಲ್ಲ. 2024 ರ ಮೈಸೂರು ದಸರಾ ಮಹೋತ್ಸವದ ತಾಲೀಮಿನ ಅವಧಿಯಲ್ಲೂ ಸಹ ಕಂಜನ್ ಭಾರಿ ಗದ್ದಲ ಸೃಷ್ಟಿಸಿತ್ತು. ಮೈಸೂರು ಅರಮನೆಯ ಆವರಣದಲ್ಲೇ ಮತ್ತೊಂದು ದಸರಾ ಆನೆಯನ್ನು ಕಂಜನ್ ಅತ್ಯಂತ ಆಕ್ರೋಶದಿಂದ ಅಟ್ಟಿಸಿಕೊಂಡು ಹೋಗಿ ಪ್ರವಾಸಿಗರು ಹಾಗೂ ಅಧಿಕಾರಿಗಳಲ್ಲಿ ತೀವ್ರ ಆತಂಕ ಮತ್ತು ಭೀತಿಯ ವಾತಾವರಣ ನಿರ್ಮಿಸಿತ್ತು.

ಸೋಮವಾರ ದುಬಾರೆ ಶಿಬಿರದಲ್ಲಿ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಭೀಕರ ಕಾಳಗ ನಡೆದಿತ್ತು. ಈ ವೇಳೆ ಅತ್ಯಂತ ಆಕ್ರಮಣಕಾರಿಯಾಗಿ ಮುನ್ನುಗ್ಗಿದ್ದ ಕಂಜನ್ ಆನೆ, ಮಾರ್ತಾಂಡ ಆನೆಯ ಹೊಟ್ಟೆ, ಕಿವಿ ಹಾಗೂ ದೇಹದ ಇತರೆ ಸೂಕ್ಷ್ಮ ಭಾಗಗಳಿಗೆ ತನ್ನ ಬಲವಾದ ದಂತಗಳಿಂದ ತೀವ್ರವಾಗಿ ತಿವಿದು ಗಂಭೀರ ಗಾಯಗೊಳಿಸಿತ್ತು. ಇದೇ ದುರಂತದಲ್ಲಿ ಮಹಿಳೆಯೊಬ್ಬರೂ ಕೂಡ ಧಾರುಣ ಸಾವನ್ನಪ್ಪಿದ್ದರು.

Elephant Marthanda Dies: ದುಬಾರೆಯಲ್ಲಿ ಸಾಕಾನೆಗಳ ಕಾಳಗ; ಗಾಯಗೊಂಡಿದ್ದ ʼಮಾರ್ತಾಂಡʼ ಆನೆ ಚಿಕಿತ್ಸೆ ಫಲಿಸದೆ ಸಾವು

ತೀವ್ರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮಾರ್ತಾಂಡ ಆನೆಗೆ ದುಬಾರೆ ಶಿಬಿರದಲ್ಲೇ ಪಶುವೈದ್ಯರಾದ ಡಾ. ಮುಜಿಭ್ ಹಾಗೂ ಚಿಟ್ಟಿಯಪ್ಪ ಅವರು ನಿರಂತರ ತುರ್ತು ಚಿಕಿತ್ಸೆ ನೀಡುತ್ತಿದ್ದರು. ಆದರೆ, ಗಂಭೀರ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಿಸದೇ ಮಾರ್ತಾಂಡ ಆನೆ ಮೃತಪಟ್ಟಿದೆ.

Vishakha Bhat Heggar

View all posts by this author