Karnataka Rain: ಬಿರುಗಾಳಿ ಸಹಿತ ಭಾರಿ ಮಳೆ; ನಾಳೆ ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮೀನುಗಾರರಿಗೆ ಎಚ್ಚರಿಕೆ!
Karnataka Rain: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ, ಕೆಲವೊಮ್ಮೆ ಭಾರೀ ಸಾಧ್ಯತೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ.
Prabhakara R
December 2, 2024
ಬೆಂಗಳೂರು: ಫೆಂಗಲ್ ಚಂಡಮಾರುತ ಪ್ರಭಾವದಿಂದ ಕಳೆದೆರಡು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಇನ್ನು ಐದು ದಿನ ರಾಜ್ಯದಲ್ಲಿ ಮಳೆಯ ಅಬ್ಬರ (Karnataka Rain) ಮುಂದುವರಿಯುವ ಮುನ್ಸೂಚನೆ ಸಿಕ್ಕಿದ್ದು, ಡಿ. 3ರಂದು ಕೊಡಗು, ಚಾಮರಾಜನಗರ ಸೇರಿ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಕರಾವಳಿ ಭಾಗದಲ್ಲಿ ಗಂಟೆಗೆ 35ರಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಫೆಂಗಲ್ ಚಂಡಮಾರುತ ಪ್ರಭಾವದಿಂದ ಕೊಡಗು, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು, ತುಮಕೂರು, ರಾಮನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ.
ಇನ್ನು ಡಿ. 4 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ 02.12.2024 ರಿಂದ 10.12.2024 ರವರೆಗೆ ಮಳೆ ಮುನ್ಸೂಚನೆ (ಮೂಲ: SHAR-ISRO): ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಿಡಿಲು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. pic.twitter.com/BLC1qVwl6j— Karnataka State Natural Disaster Monitoring Centre (@KarnatakaSNDMC) December 2, 2024
ಡಿ. 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ವಿಜಯಪುರ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಡಿ. 6ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳು ಮತ್ತು ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಡಿ.8ರವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ.
ಈ ಸುದ್ದಿಯನ್ನೂ ಓದಿ | Bengaluru Rain: ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಕುಸಿದು ಬಿದ್ದ ಮನೆ: ವೃದ್ಧ ದಂಪತಿ ಪ್ರಾಣಾಪಾಯದಿಂದ ಪಾರು
ಮೀನುಗಾರರಿಗೆ ಎಚ್ಚರಿಕೆಡಿ. 3ರಂದು ಕರ್ನಾಟಕ ಕರಾವಳಿಯುದ್ದಕ್ಕೂ ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ ಗಾಳಿ ಬೀಸುವ ಜೊತೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಸೂಚಿಸಲಾಗಿದೆ.
ಡಿ.4ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ, ಕೆಲವೊಮ್ಮೆ ಭಾರೀ ಸಾಧ್ಯತೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 23° C ಮತ್ತು 20° C ಆಗಿರಬಹುದು.
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ. ಕೆಲವೊಮ್ಮೆ ಭಾರೀ ಸಾಧ್ಯತೆ.. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 23° C ಮತ್ತು 20° C ಆಗಿರಬಹುದು.