ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೊಡಗಿನಲ್ಲಿ ದಾರುಣ ಘಟನೆ; ಶೌಚಾಲಯದ ಗುಂಡಿಗೆ ಬಿದ್ದ ಮಹಿಳೆ, ರಕ್ಷಿಸಲು ಹೋದ ವ್ಯಕ್ತಿಯೂ ಸಾವು!

ಗದ್ದೆಯಲ್ಲಿ ಶುಂಠಿ ತೆಗೆದುಕೊಂಡು ಬರಲು ಮಹಿಳೆಯು ಹಳೆಯ ಶೌಚಾಲಯದ ಗುಂಡಿ ಏಕಾಏಕಿ ಕುಸಿದ ಪರಿಣಾಮ ಅದರೊಳಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಮುಂದಾದ ವ್ಯಕ್ತಿಯೂ ಕೊನೆಯುಸಿರೆಳೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಶೌಚಾಲಯದ ಗುಂಡಿಗೆ ಬಿದ್ದ ಮಹಿಳೆ, ರಕ್ಷಿಸಲು ಹೋದ ವ್ಯಕ್ತಿಯೂ ಸಾವು!

-

Prabhakara R
Prabhakara R Aug 10, 2026 11:08 PM

ಮಡಿಕೇರಿ: ಶೌಚಾಲಯದ ಗುಂಡಿಗೆ ಬಿದ್ದು ಮಹಿಳೆ ಸೇರಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆಯ (Kodagu) ಸೋಮವಾರಪೇಟೆ ತಾಲೂಕಿನ ಹೊಸತೋಟ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಶುಂಠಿ ಕೀಳಲು ತೆರಳಿದ್ದ ಮಹಿಳೆಯೊಬ್ಬರು ಶೌಚಾಲಯದ ಗುಂಡಿಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಮುಂದಾದ ವ್ಯಕ್ತಿಯೂ ವಿಷಾನಿಲದ ಪರಿಣಾಮ ಮೃತಪಟ್ಟಿದ್ದಾರೆ.

ಮೃತರನ್ನು ಗ್ರಾಮದ ಜನಾರ್ದನ (43) ಹಾಗೂ ನಿತ್ಯ (46) ಎಂದು ಗುರುತಿಸಲಾಗಿದೆ. ನಿತ್ಯ ಅವರು ಶುಂಠಿ ಬೇಕೆಂದು ಸಂಬಂಧಿಕರ ಮನೆಗೆ ತೆರಳಿದ್ದರು. ಈ ವೇಳೆ, ನಾನು ಗದ್ದೆಯಿಂದ ಶುಂಠಿ ತೆಗೆದುಕೊಂಡು ಬರುತ್ತೇನೆ ಎಂದು ಹೇಳಿ ನಿತ್ಯ ಗದ್ದೆಯತ್ತ ತೆರಳಿದ್ದರು. ಗದ್ದೆಯ ಸಮೀಪದಲ್ಲಿದ್ದ ಹಳೆಯ ಶೌಚಾಲಯದ ಗುಂಡಿ ಏಕಾಏಕಿ ಕುಸಿದ ಪರಿಣಾಮ ಅವರು ಅದರೊಳಗೆ ಬಿದ್ದಿದ್ದಾರೆ.

ಇದನ್ನು ಕಂಡ ಜನಾರ್ದನ ಅವರು ನಿತ್ಯ ಅವರನ್ನು ರಕ್ಷಿಸಲು ಗುಂಡಿಯೊಳಗೆ ಇಳಿದಿದ್ದಾರೆ. ಆದರೆ, ಗುಂಡಿಯೊಳಗೆ ಸಂಗ್ರಹವಾಗಿದ್ದ ವಿಷಕಾರಿ ಅನಿಲ ಸೇವಿಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Bengaluru News: ಬೆಂಗಳೂರಿನ ತಾಜ್‌ ಹೋಟೆಲ್‌ನಲ್ಲಿ ಘೋರ ಘಟನೆ; ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ!

ಘಟನೆಯ ಮಾಹಿತಿ ತಿಳಿದ ಕೂಡಲೇ ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮಡಿಕೇರಿ ಶಾಸಕ ಮಂತರ್ ಗೌಡ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.