Road Accident: ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರು ಸಾವು
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ನೂತನ ಚೆನ್ನೈ-ಬೆಂಗಳೂರು ಕಾರಿಡಾರ್ ಹೆದ್ದಾರಿಯಲ್ಲಿ ಭಾನುವಾರ (ಮಾ. 2) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಶ್ರೀನಾಥ್ ಮೃತರು.


ಕೋಲಾರ: ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ನೂತನ ಚೆನ್ನೈ-ಬೆಂಗಳೂರು ಕಾರಿಡಾರ್ ಹೆದ್ದಾರಿಯಲ್ಲಿ ಭಾನುವಾರ (ಮಾ. 2) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ (Road Accident). ಇನ್ನೋವಾ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಶ್ರೀನಾಥ್ ಮೃತಪಟ್ಟಿದ್ದಾರೆ. ಇನ್ನು ಸುಶ್ಮಿತಾ, ವಿರುತಾ, ಸುಜಾತಾ, ಸುನಿಲ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ವಾಪಸಾಗುತ್ತಿದ್ದ ಕಾರು ಮತ್ತು ಬೈಕ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಕಾರಣ ಏನು?
ಬೆಂಗಳೂರಿನಿಂದ ಕಾರು ವಾಪಸ್ ಆಗುತ್ತಿದ್ದು. ಈ ವೇಳೆ ರಾಂಗ್ ಸೈಡ್‌ನಲ್ಲಿ ಎದುರಿಗೆ ಬಂದ ಬೈಕ್ ಸವಾರನಿಂದಾಗಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಅಪಘಾತದ ತೀವ್ರತೆಗೆ ಕಾರು ಡಿಕ್ಕಿಯಾಗಿ ಪಕ್ಕದ ಕಂದಕಕ್ಕೆ ಉರುಳಿ ನಂತರ ರಸ್ತೆಯಲ್ಲಿ ನಿಂತಿದೆ.
ಇತ್ತೀಚಗಷ್ಟೆ ಬೆಂಗಳೂರು-ಚೆನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ವಾಹನ ಸವಾರರ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿತ್ತು. ಇದೀಗ ರಾಂಗ್ ಸೈಡ್‌ನಲ್ಲಿ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಾಲ್ವರು ಬಲಿಯಾದಂತಾಗಿದೆ.
ಈ ಸುದ್ದಿಯನ್ನೂ ಓದಿ: Road Accident: ಬೆಂಗಳೂರಿನಲ್ಲಿ ಭೀಕರ ಅಪಘಾತ; ಎರಡು ಬಿಎಂಟಿಸಿ ಬಸ್ ಮಧ್ಯೆ ಆಟೋ ಅಪ್ಪಚ್ಚಿ, ಇಬ್ಬರ ಸಾವು
ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿ; 5 ಸಾವು
ಚಾಮರಾಜನಗರ: ಮಾ. 1ರಂದು ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಐವರು ರಸ್ತೆ ದುರಂತದಲ್ಲಿ ಬಲಿಯಾಗಿದ್ದರು. ಕೊಳ್ಳೇಗಾಲ (Kollegala) ತಾಲೂಕಿನ ಚಿಕ್ಕಿಂದುವಾಡಿ ಬಳಿ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದರು. ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಮಹದೇಶ್ವರ ದೇವಾಲಯ ದರ್ಶನಕ್ಕೆ ತೆರಳುತ್ತಿದ್ದರು.
ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ತೆರಳುತ್ತಿತ್ತು. ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿತ್ತು. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಅಪಘಾತದಲ್ಲಿ ಮೃತಪಟ್ಟ ಐವರೂ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳಾದರೆ ಓರ್ವ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದಾರೆ. ಮೃತರು ಮೈಸೂರಿನ ಎಂಐಟಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.