Karnataka Rain: ಇಂದು, ನಾಳೆ ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ಸಾಧ್ಯತೆ
Karnataka Rain: ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26°C ಮತ್ತು 20°C ಆಗಿರಬಹುದು.
Prabhakara R
December 11, 2024
ಬೆಂಗಳೂರು: ಫೆಂಗಲ್ ಚಂಡಮಾರುತ ಪ್ರಭಾವ ಕಡಿಮೆಯಾದ ಬಳಿಕ ರಾಜ್ಯದಲ್ಲಿ ಇಳಿಮುಖವಾಗಿದ್ದ ಮಳೆ (Karnataka Rain) ಮತ್ತೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪಶ್ಚಿಮ-ವಾಯುವ್ಯದ ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಇಂದು ಮತ್ತು ನಾಳೆ (ಡಿ.11 ಮತ್ತು 12) ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೊಡಗು, ತುಮಕೂರು, ಕೋಲಾರ, ಚಿತ್ರುದುರ್ಗ, ಮಂಡ್ಯ, ಮೈಸೂರು, ರಾಮನಗರ ಹಾಗೂ ಚಾಮರಾಜನಗರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಡಿ.12ರಂದು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಂಜು ಇರುವ ಸಾಧ್ಯತೆಯಿದೆ.
#ಮಳೆ #ಎಚ್ಚರಿಕೆ: ರಾಜ್ಯದಲ್ಲಿನ ಪ್ರಸ್ತುತ ಹವಾಮಾನ ಪರಿಸ್ಥಿತಿ ಮತ್ತು ಪರಿಣಾಮಗಳು : ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪಶ್ಚಿಮ-ವಾಯುವ್ಯದ ಶ್ರೀಲಂಕಾ - ತಮಿಳುನಾಡು ಕರಾವಳಿ ತಲುಪುವ ಸಾಧ್ಯತೆಯಿದೆ.@KarnatakaVarthe #KSNDMC pic.twitter.com/DH3VsHR5tI— Karnataka State Natural Disaster Monitoring Centre (@KarnatakaSNDMC) December 11, 2024
ಡಿ.13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಂಜು ಇರುವ ಸಾಧ್ಯತೆಯಿದೆ.
ಡಿ.14 ಮತ್ತು 15ರಂದು ರಾಜ್ಯಾಂದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಇನ್ನು ಡಿ. 16ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಂಜು ಇರುವ ಸಾಧ್ಯತೆಯಿದೆ.
ಡಿ.17ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಂಜು ಇರುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Health Tips: ಬಿಸಿ ನೀರಿಗೆ ತಣ್ಣೀರು ಸೇರಿಸಿ ಕುಡಿದರೆ ಏನಾಗುತ್ತದೆ ಗೊತ್ತಾ?
ತಾಪಮಾನದ ಮುನ್ಸೂಚನೆಉತ್ತರ ಒಳನಾಡಿನಲ್ಲಿ, ಮುಂದಿನ 3 ದಿನಗಳವರೆಗೆ ಕನಿಷ್ಠ ತಾಪಮಾನದಲ್ಲಿ 2 ಡಿಗ್ರಿ ಸೆಲ್ಸಿಯಸ್ ಇಳಿಕೆ, ನಂತರ ಯಾವುದೇ ದೊಡ್ಡ ಬದಲಾವಣೆಯಾಗುವುದಿಲ್ಲ. ದಕ್ಷಿಣ ಒಳನಾಡಿನಲ್ಲಿ ಡಿ.13ರಿಂದ 15 ರವರೆಗೆ ಕನಿಷ್ಠ ತಾಪಮಾನದಲ್ಲಿ 2 ಡಿಗ್ರಿ ಸೆಲ್ಸಿಯಸ್ ಕುಸಿತ, ನಂತರ ಯಾವುದೇ ದೊಡ್ಡ ಬದಲಾವಣೆಗಳಿಲ್ಲ. ಕರಾವಳಿ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಇರುವುದಿಲ್ಲ.
ಡಿ.13ರ ಬೆಳಗ್ಗೆವರೆಗೆ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26°C ಮತ್ತು 20°C ಆಗಿರಬಹುದು.
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25°C ಮತ್ತು 18°C ಆಗಿರಬಹುದು.