ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self harming: ಮದುವೆಗೆ ವಿರೋಧ, ರೈಲಿಗೆ ತಲೆ ಕೊಟ್ಟು ಅಂತರ್ಜಾತಿ ಪ್ರೇಮಿಗಳು ಆತ್ಮಹತ್ಯೆ

Kolar: ಮನೆಯವರ ಒಪ್ಪಿಗೆ ಪಡೆದೇ ಮದುವೆ ಆಗುವುದಕ್ಕೆ ನಿರ್ಧರಿಸಿದ್ದರು. ಅದರಂತೆ ಪರಸ್ಪರ ಪ್ರೀತಿಯನ್ನು ಪೋಷಕರ ಬಳಿ ಇಬ್ಬರೂ ಹೇಳಿಕೊಂಡಿದ್ದಾರೆ. ಇವರಿಬ್ಬರೂ ಬೇರೆ ಬೇರೆ ಜಾತಿಗೆ ಸೇರಿದ್ದವರಾಗಿದ್ದರಿಂದ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಕೋಲಾರದಲ್ಲಿ ಘಟನೆ ನಡೆದಿದೆ.

ಮದುವೆಗೆ ವಿರೋಧ, ರೈಲಿಗೆ ತಲೆ ಕೊಟ್ಟು ಅಂತರ್ಜಾತಿ ಪ್ರೇಮಿಗಳು ಆತ್ಮಹತ್ಯೆ

-

ಹರೀಶ್‌ ಕೇರ ಹರೀಶ್‌ ಕೇರ Sep 26, 2025 7:33 AM

ಕೋಲಾರ: ಮದುವೆಗೆ (Marriage) ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು (lovers) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ (Self harming) ಮಾಡಿಕೊಂಡಿರುವ ದಾರುಣ ಘಟನೆ ಕೋಲಾರ (Kolar news) ಜಿಲ್ಲೆ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಮಾಲೂರು ತಾಲ್ಲೂಕಿನ ಶೆಟ್ಟಹಳ್ಳಿ ನಿವಾಸಿಗಳಾದ ಸತೀಶ್‌ (19) ಹಾಗೂ ಶ್ವೇತಾ (18) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಸತೀಶ್‌ ಐಟಿಐ ವ್ಯಾಸಂಗ ಮಾಡಿದ್ದು, ಶ್ವೇತಾ ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿಸುತ್ತಿದ್ದರು. ಮನೆಯವರ ಒಪ್ಪಿಗೆ ಪಡೆದೇ ಮದುವೆ ಆಗುವುದಕ್ಕೆ ನಿರ್ಧರಿಸಿದ್ದರು ಎನ್ನಲಾಗಿದೆ. ಅದರಂತೆ ಪರಸ್ಪರ ಪ್ರೀತಿಯನ್ನು ಪೋಷಕರ ಬಳಿ ಇಬ್ಬರೂ ಹೇಳಿಕೊಂಡಿದ್ದಾರೆ. ಇವರಿಬ್ಬರೂ ಬೇರೆ ಬೇರೆ ಜಾತಿಗೆ ಸೇರಿದ್ದವರಾಗಿದ್ದರಿಂದ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಸತೀಶ್‌ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಾನೆ. ಇಂದು ಬೆಳಗ್ಗೆ ಇಬ್ಬರು ಮನೆಯಿಂದ ಹೊರಬಂದಿದ್ದಾರೆ. ನಂತರ ಸತೀಶ್‌ ಬೈಕ್‌ನಲ್ಲಿ ತನ್ನ ಲವರ್ ಶ್ವೇತಾಳನ್ನು ಕರೆದುಕೊಂಡು ಮಾಲೂರಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿಹೋಗಿ ಬೈಕ್‌ ನಿಲ್ಲಿಸಿದ್ದಾನೆ. ನಂತರ ಕೋಲಾರದಿಂದ ಬೆಂಗಳೂರಿಗೆ ಹೊರಡುವ ರೈಲು ಬರುವುದನ್ನೇ ಕಾದು ನಿಂತಿದ ಪ್ರೇಮಿಗಳು ರೈಲು ಬರುತ್ತಿದ್ದಂತೆ 6.30 ರ ಸುಮಾರಿನಲ್ಲಿ ಇಬ್ಬರೂ ಕೈ-ಕೈ ಹಿಡಿದು ಹಳಿ ಮೇಲೆ ಹಾರಿ ರೈಲಿಗೆ ಸಿಕ್ಕಿ ಆತಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿದು ಕಂಟೋನ್ಮೆಂಟ್‌ ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಇಬ್ಬರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ ಅವರ ಪೋಷಕರುಗಳಿಗೆ ಮಾಹಿತಿ ರವಾನಿಸಿದ್ದಾರೆ. ಈ ಬಗ್ಗೆ ಕಂಟೋನೆಂಟ್‌ ರೈಲ್ವೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಪಾವಗಡದಲ್ಲಿ ಘೋರ ಘಟನೆ; ಇಬ್ಬರು ಮಕ್ಕಳ ಕತ್ತು ಕೊಯ್ದು ಕೊಂದು ತಾಯಿ ಆತ್ಮಹತ್ಯೆ!