ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kolara News: ಜಾನುವಾರಿಗೆ ಮೇವು ತರಲು ಹೋಗಿದ್ದ ತಾಯಿ, ಮಗ ಕೃಷಿಹೊಂಡದಲ್ಲಿ ಕಾಲುಜಾರಿ ಬಿದ್ದು ಸಾವು

ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ತಾಯಿ, ಮಗು ಸಾವನ್ನಪ್ಪಿರುವ ಧಾರುಣ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಹೊಗರಿಗೊಲ್ಲಹಳ್ಳಿಯಲ್ಲಿ ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ವೇಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಾಲಾ (30) ಹಾಗೂ ಮಗು ಚಕ್ರವರ್ತಿ (06) ಸಾವನ್ನಪ್ಪಿದ್ದಾರೆ.

ಕೋಲಾರ: ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ತಾಯಿ, ಮಗು ಸಾವನ್ನಪ್ಪಿರುವ ಧಾರುಣ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಹೊಗರಿಗೊಲ್ಲಹಳ್ಳಿಯಲ್ಲಿ ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ವೇಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಾಲಾ (30) ಹಾಗೂ ಮಗು ಚಕ್ರವರ್ತಿ (06) ಸಾವನ್ನಪ್ಪಿದ್ದಾರೆ. ಮಾಲಾಳ ಮಗ ಆಟವಾಡುತ್ತಾ ಕೃಷಿ ಹೊಂಡದ ಬಳಿ ತೆರಳಿದ್ದಾನೆ. ಮೇವು ಕಟಾವು ಮಾಡುತ್ತಿದ್ದ ಮಾಲಾ ಇದನ್ನು ಗಮನಿಸಿರಲಿಲ್ಲ.

ಮಗ ಕೃಷಿ ಹೊಂಡಕ್ಕೆ ಬಿದ್ದ ಬಳಿಕ ಆತನನ್ನು ಕಾಪಾಡಲು ಹೋಗಿದ್ದಾಳೆ. ಮಗನನ್ನು ರಕ್ಷಿಸಲು ಹೋಗಿ ಮಾಲಾ ಕೂಡ ಸಾವನ್ನಪ್ಪಿದ್ದು, ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯೇಕ ಘಟನೆಯಲ್ಲಿ, ಕನ್ನಡ ರಾಜ್ಯೋತ್ಸವದಂದು, ಪ್ರವಾಸಕ್ಕೆಂದು ಬಂದಿದ್ದ ಮಕ್ಕಳು ಕಾವೇರಿ ನದಿಯಲ್ಲಿ ಕೊಚ್ಚಿಹೋಗಿರುವ ಭೀಕರ ಘಟನೆ ಮಂಡ್ಯದಲ್ಲಿ ಸಂಭವಿಸಿದೆ. ಕಾವೇರಿ ನದಿಯಲ್ಲಿ ಒಟ್ಟು ನಾಲ್ವರು ಮಕ್ಕಳು ಕೊಚ್ಚಿ ಹೋಗಿದ್ದು, ಒಬ್ಬ ಬಾಲಕಿ ಸಾವು ಕಂಡಿದ್ದಾಳೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ರಾಮಸ್ವಾಮಿ ನಾಲೆಯ ಬಳಿ ಘಟನೆ ಸಂಭವಿಸಿದೆ. ಮೈಸೂರಿನ ಶಾಂತಿನಗರದ ಮದರಸದಿಂದ ಮಕ್ಕಳನ್ನು ಪಿಕ್‌ನಿಕ್‌ಗೆ ಕರೆದುಕೊಂಡು ಬರಲಾಗಿತ್ತು. ಪ್ರವಾಸಕ್ಕೆ ಬಂದ ಮಕ್ಕಳು ನಾಲೆಯಲ್ಲಿ ಆಟವಾಡುತ್ತಿದ್ದರು. ಈ ವೇಳೆ ಒಟ್ಟು ನಾಲ್ವರು ಮಕ್ಕಳು ಕೊಚ್ಚಿ ಹೋಗಿದ್ದಾರೆ. ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ವೇಳೆ 13 ವರ್ಷದ ಐಶಾ ಎನ್ನುವ ಬಾಲಕಿಯನ್ನು ರಕ್ಷಣೆ ಮಾಡಲಾಗಿತ್ತಾದರೂ, ಆಸ್ಪತ್ರೆಗೆ ಸೇರಿಸಿದಾಗ ಚಿಕಿತ್ಸೆಗೆ ಸ್ಪಂದಿಸದೇ ಐಶಾ ಸಾವು ಕಂಡಿದ್ದಾಳೆ.

ಈ ಸುದ್ದಿಯನ್ನೂ ಓದಿ: Self Harming: ಯುವತಿ ಅನುಮಾನಾಸ್ಪದ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

14 ವರ್ಷದ ಹನಿ, 13 ವರ್ಷದ ಅರ್ಫಿನ್‌ ಹಾಗೂ 13 ವರ್ಷದ ತರ್ವಿನ್‌ ನಾಪತ್ತೆಯಾಗಿದ್ದಾರೆ. ಮಕ್ಕಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ. ಆದರೆ, ಕತ್ತಲು ಆವರಿಸಿದ ಕಾರಣ ಶೋಧ ಕಾರ್ಯ ಸ್ಥಗಿತಗೊಂಡಿತ್ತು. ಇಂದು ಬೆಳಿಗ್ಗೆ ಮತ್ತೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.