ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಬೆಂಗಳೂರು- ಚೆನ್ನೈ ಹೈವೇಯಲ್ಲಿ ಭೀಕರ ಕಾರು ಅಪಘಾತ, ನಾಲ್ವರು ಸಾವು

Bengaluru- Chennai highway: ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆ ನೋಡಿ ಜನರು ಬೆಚ್ಚಿಬಿದ್ದಿದ್ದಾರೆ. ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು ಬಳಿಕ ಬ್ರಿಡ್ಜ್​​ನಿಂದ ಕೆಳಗೆ ಚಿಮ್ಮಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ.

ಬೆಂಗಳೂರು- ಚೆನ್ನೈ ಹೈವೇಯಲ್ಲಿ ಭೀಕರ ಕಾರು ಅಪಘಾತ, ನಾಲ್ವರು ಸಾವು

ಕೋಲಾರದಲ್ಲಿ ರಸ್ತೆ ಅಪಘಾತ -

ಹರೀಶ್‌ ಕೇರ
ಹರೀಶ್‌ ಕೇರ Nov 24, 2025 12:02 PM

ಕೋಲಾರ, ನ.24: ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ಹೈವೇಯಲ್ಲಿ (Bengaluru- chennai highway) ಕೋಲಾರದ (Kolara) ಸಮೀಪ ಭೀಕರ ಅಪಘಾತ (Road Accident) ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಮಾಲೂರು ತಾಲೂಕಿನ ಅಬ್ಬೇನಹಳ್ಫಿ ಬಳಿ ಕಾರು ರಸ್ತೆ ಡಿವೈಡರ್​​ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಮೇಲಿಂದ ಕೆಳಗೆ ಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ.

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆ ನೋಡಿ ಜನರು ಬೆಚ್ಚಿಬಿದ್ದಿದ್ದಾರೆ. ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು ಬಳಿಕ ಬ್ರಿಡ್ಜ್​​ನಿಂದ ಕೆಳಗೆ ಚಿಮ್ಮಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ. ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತ ಯುವಕರಾಗಿದ್ದಾರೆ. ಅಪಘಾತದ ಬಳಿಕ ನಾಲ್ವರನ್ನು ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಕೊನೆಯುಸಿರೆಳೆದಿದ್ದಾರೆ.

ಮೃತರೆಲ್ಲರೂ ಚೆನ್ನೈ ಮೂಲದವರಾಗಿದ್ದಾರೆ. ತಮಿಳುನಾಡಿನಿಂದ ಬೆಂಗಳೂರಿನ ಕಡೆ ಬರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಈ ಸಂಬಂಧ ಮಾಲೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೈಕ್‌ಗಳ ನಡುವೆ ಭೀಕರ ಡಿಕ್ಕಿ, ಇಬ್ಬರು ಸ್ಥಳದಲ್ಲಿಯೇ ಸಾವು

ಬೀದರ್‌: ತಾಲೂಕಿನ ಬೆನಕನಹಳ್ಳಿಯಲ್ಲಿ ಶನಿವಾರ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, (Rd Accident) ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಲ್ಲಿಕಾರ್ಜುನ ಜೋಳದಪ್ಪಕ (40), ಔರಾದ್ ತಾಲೂಕಿನ ನಿವಾಸಿ ಮತ್ತು ಪವನ್ ಕುಮಾರ್ (32), ಎಂಬುವವರು ಚಾಂಬೋಳ ಗ್ರಾಮದ ನಿವಾಸಿಗಳು ಈ ಗಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತೇಜಸ್ ಯುದ್ಧ ವಿಮಾನ ಅಪಘಾತ: ಪೈಲೆಟ್ ನಮಾಂಶ್‌ ಸಯಾಲ್ ಕೊನೆಯ ಕ್ಷಣದ ವಿಡಿಯೊ ಇಲ್ಲಿದೆ

ಬೀದರ್-ಔರಾದ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 1:30ರ ಸಮಯದಲ್ಲಿ ಈ ದುರಂತ ನಡೆದಿದೆ. ಡಿಕ್ಕಿಯ ಪರಿಣಾಮ ಎರಡೂ ಬೈಕ್‌ಗಳು ಎಗರಿ ಬಿದ್ದಿವೆ. ಮಲ್ಲಿಕಾರ್ಜುನ ಮತ್ತು ಪವನ್ ಕುಮಾರ್ ಅವರ ತಲೆಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕ್ಟೀವಾ ಸ್ಕೂಟರ್‌ನಲ್ಲಿ ಪವನ್ ಕುಮಾರ್ ಜೊತೆಗೆ ಹಿಂದೆ ಕೂತಿದ್ದ ಮೂವರು ಪ್ರಯಾಣಿಕರಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಸೇರಿ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಮೂವರನ್ನೂ ಐಸಿಯುವಿನಲ್ಲಿ ದಾಖಲಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Saudi Arabia Bus Accident: ಹೊತ್ತಿ ಉರಿಯುತ್ತಿದ್ದ ಬಸ್‌ನಿಂದ ಬದುಕಿ ಬಂದ ಏಕೈಕ ವ್ಯಕ್ತಿ ಈತ! ಸೌದಿ ಅಪಘಾತದ ಭೀಕರತೆ ಇಲ್ಲಿದೆ