Road Accident: ಕಾರು ಮರಕ್ಕೆ ಡಿಕ್ಕಿ, ಗರ್ಭಿಣಿ ರುಂಡ ಕತ್ತರಿಸಿ ಸಾವು
Road Accident: ಅರ್ಚನಾ ಅವರ ಗ್ರಾಮ ಕೊರಚನೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಲಾರಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಅರ್ಚನಾ ದೇಹದಿಂದ ರುಂಡ ಹಾಗೂ ಎಡಗೈ ಭಾಗ ಪ್ರತ್ಯೇಕವಾಗಿದೆ. ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮೃತ ಅರ್ಚನಾ

ಕೋಲಾರ : ಕೋಲಾರದಲ್ಲಿ (Kolar news) ಭೀಕರ ಅಪಘಾತವೊಂದು (Road Accident) ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಅದರಲ್ಲಿದ್ದ ಗರ್ಭಿಣಿಯ (Pregnant) ರುಂಡ ಕತ್ತರಿಸಿಹೋಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೋಲಾರದ ಮಾಲೂರಿನಭಾವನಹಳ್ಳಿ ರಸ್ತೆಯ ಪುರ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗರ್ಭಿಣಿ ಅರ್ಚನಾ ಅವರನ್ನು ಅವರ ಮಾವ ನಾರಾಯಣಸ್ವಾಮಿ ಅವರ ಗ್ರಾಮ ಕೊರಚನೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಲಾರಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನಲ್ಲಿದ್ದ ಅರ್ಚನಾ ದೇಹದಿಂದ ರುಂಡ ಹಾಗೂ ಎಡಗೈ ಭಾಗ ಪ್ರತ್ಯೇಕವಾಗಿದೆ. ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆಯಲ್ಲಿ ಯುಪಿಎಸ್ ಸ್ಫೋಟಗೊಂಡು ಇಬ್ಬರು ಸಾವು
ದಾವಣಗೆರೆ: ದಾವಣಗೆರೆಯ (Davanagere news) ಮನೆಯೊಂದರಲ್ಲಿದ್ದ ಯುಪಿಎಸ್ ಸ್ಪೋಟಗೊಂಡು (UPS blast) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ ಪರಿಣಾಮ ಅಗ್ನಿ ಅವಘಡ (fire accident) ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ವಿಮಾ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಹಿರೇಮಠ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: Road Accident: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು