ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Skywalk Collapse: ಕೋಲಾರ ಹೆದ್ದಾರಿಯಲ್ಲಿ ಲಾರಿ ಡಿಕ್ಕಿಯಾಗಿ ಮುರಿದು ಬಿದ್ದ ಸ್ಕೈವಾಕ್; ಕಾರು ಜಖಂ

Kolar News: ಕೋಲಾರ ಹೊರವಲಯದ ಕೊಂಡರಾಜನಹಳ್ಳಿಯಲ್ಲಿ ಅಪಘಾತ ನಡೆದಿದೆ. ಸತತ ನಾಲ್ಕೈದು ಗಂಟೆಗಳ ಕಾರ್ಯಾಚರಣೆ ಬಳಿಕ ಮುರಿದು ಬಿದ್ದಿದ್ದ ಸ್ಕೈವಾಕ್ ತೆರವುಗೊಳಿಸಲಾಗಿದೆ. ಅಪಘಾತದಿಂದ ಕೋಲಾರ- ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡುವಂತಾಯಿತು.

ಕೋಲಾರ ಹೆದ್ದಾರಿಯಲ್ಲಿ ಲಾರಿ ಡಿಕ್ಕಿಯಾಗಿ ಮುರಿದು ಬಿದ್ದ ಸ್ಕೈವಾಕ್

-

Prabhakara R Prabhakara R Sep 28, 2025 2:18 PM

ಕೋಲಾರ: ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಡಿಕ್ಕಿಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೈವಾಕ್ ಮುರಿದು ಬಿದ್ದು, ಕಾರು ಜಖಂಗೊಂಡ ಘಟನೆ ಕೋಲಾರ ಹೊರವಲಯದ ಕೊಂಡರಾಜನಹಳ್ಳಿಯಲ್ಲಿ ನಡೆದಿದೆ. ಸ್ಕೈವಾಕ್ ಪಿಲ್ಲರ್‌ಗೆ ಲಾರಿ ಡಿಕ್ಕಿಯಾಗಿದ್ದರಿಂದ ಅವಘಡ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಿಲ್ಲ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ತೆರಳಿ, ಸ್ಕೈವಾಕ್‌ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ಸತತ ನಾಲ್ಕೈದು ಗಂಟೆಗಳ ಕಾರ್ಯಾಚರಣೆ ಬಳಿಕ ಮುರಿದು ಬಿದ್ದಿದ್ದ ಸ್ಕೈವಾಕ್ ತೆರವುಗೊಳಿಸಲಾಗಿದೆ. ಘಟನೆಯಿಂದ ಕೋಲಾರ- ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡುವಂತಾಯಿತು. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



ಭೀಕರ ಅಪಘಾತ; KSRTC’ ಬಸ್ ಡಿಕ್ಕಿಯಾಗಿ ಮೂವರು ಸಾವು

ಹಾಸನ: ಕೆಎಸ್​​​ಆರ್​​ಟಿಸಿ ಬಸ್ (KSRTC bus)​​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ (Road Accident) ಮೂವರು ಯುವಕರು ಸಾವನ್ನಪ್ಪಿರುವಂತಹ (death) ಭೀಕರ ಘಟನೆಯೊಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ಶನಿವಾರ ರಾತ್ರಿ ನಡೆದಿದೆ. ಒಂದೇ ಬೈಕ್ ನಲ್ಲಿ ಮೂವರು ಯುವಕರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು. ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವಾಗ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಇರ್ಫಾನ್ (25), ತರುಣ್ (26) ಹಾಗೂ ರೇವಂತ್ (27) ಎಂದು ಗುರುತಿಸಲಾಗಿದೆ. ಹಳ್ಳಿಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು ಎನ್ನಲಾಗುತ್ತಿದೆ. ಕೆಎಸ್​​​ಆರ್​​ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಮೈಸೂರು ಕಡೆಯಿಂದ ಒಂದೇ ದ್ವಿಚಕ್ರ ವಾಹನದಲ್ಲಿ ಮೂವರು ಯುವಕರು ಬರುತ್ತಿದ್ದರು. ಈ ವೇಳೆ ಭೀಕರ ಅಪಘಾತ ಸಂಭವಿಸಿದೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಪ್ರತ್ಯೇಕ ಘಟನೆಯಲ್ಲಿ, ನಗರದ ಹೀರಾಪುರ ಮತ್ತು ಹಾಗರಗಾ-ವೆಂಕಟಬೇನೂರ ರಸ್ತೆಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಾಗರಗಾ ರಸ್ತೆಯ ಫೈಜಲ್ ರೆಹಮಾನ್ ತಂದೆ ಮೊಹಮ್ಮದ್ ಸುಲ್ತಾನ್ (15) ಟ್ಯೂಷನ್‍ಗೆ ಬೈಕ್ ಮೇಲೆ ಹೀರಾಪುರ ಕಡೆಗೆ ಹೋಗುತ್ತಿದ್ದಾಗ ತಲೆಯ ಮೇಲಿನ ಟೋಪಿ ಕೆಳಗೆ ಬಿದ್ದಿದ್ದು, ಅದನ್ನು ತೆಗೆದುಕೊಳ್ಳಲು ಹೋದಾಗ ರಿಂಗ್ ರೋಡ್ ಕಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಫೈಜಲ್ ರೆಹಮಾನ್‍ನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ: Crime News: BMW ಕಾರು ಅಪಘಾತದಿಂದ ಆರ್ಥಿಕ ಇಲಾಖೆ ಅಧಿಕಾರಿ ಸಾವು ಪ್ರಕರಣ: ಆರೋಪಿ ಗಗನ್‌ಪ್ರೀತ್‌ಗೆ ಜಾಮೀನು

ಇನ್ನೊಂದು ಪ್ರಕರಣದಲ್ಲಿ ವೆಂಕಟಬೇನೂರ ಗ್ರಾಮದ ಅನ್ಸರಸಾಬ್ ಅಲಿಯಾಸ್ ಅನ್ಸರ್ ಅಲಿ ಎಂಬುವವರು ಮರತೂರ ಗ್ರಾಮದಲ್ಲಿರುವ ಜಮೀನಿಗೆ ಹೋಗಿ ಮರಳಿ ಸ್ವಗ್ರಾಮಕ್ಕೆ ಬರಲು ಹಾಗರಗಾ ಕ್ರಾಸ್ ಹತ್ತಿರ ಟಂಟಂನಲ್ಲಿ ಕುಳಿತಿದ್ದಾರೆ. ಟಂಟಂ ವೆಂಕಟಬೇನೂರ ಕಡೆಗೆ ಹೋಗುತ್ತಿದ್ದಾಗ ಪಲ್ಟಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.