ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BY Vijayendra: ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ NDA ಅಭ್ಯರ್ಥಿಗಳ ಗೆಲುವು: ವಿಜಯೇಂದ್ರ ಅಭಿನಂದನೆ

Vemagal-Kurugal Town Panchayat election: ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆ ಮಾಜಿ ಸಚಿವ ವರ್ತೂರು ಪ್ರಕಾಶ್ ಸೇರಿ ಬಿಜೆಪಿ-ಜೆಡಿಎಸ್‌ ಉಭಯ ಪಕ್ಷಗಳ ಜಿಲ್ಲಾಧ್ಯಕ್ಷರು, ಪ್ರಮುಖರ ಸಂಘಟಿತ ಹೋರಾಟದ ಮೂಲಕ ಗೆಲುವಿಗೆ ಶ್ರಮಿಸಿದ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೃತ್ಪೂರ್ವಕ ಬಿ.ವೈ.ವಿಜಯೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

ಕೋಲಾರ: ಕೋಲಾರ ಜಿಲ್ಲೆಯ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು. ಕೋಲಾರ ಜಿಲ್ಲೆಯ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಮಾಜಿ ಸಚಿವ ವರ್ತೂರು ಪ್ರಕಾಶ್ ಸೇರಿ ಉಭಯ ಪಕ್ಷಗಳ ಜಿಲ್ಲಾಧ್ಯಕ್ಷರು, ಪ್ರಮುಖರ ಸಂಘಟಿತ ಹೋರಾಟದ ಮೂಲಕ ಗೆಲುವಿಗೆ ಶ್ರಮಿಸಿದ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.



ವೇಮಗಲ್-ಕುರುಗಲ್‌ ಪಟ್ಟಣ ಪಂಚಾಯಿತಿಯ ಒಟ್ಟು 17 ಸ್ಥಾನಗಳ ಪೈಕಿ ಎನ್‌ಡಿಎ ಅಭ್ಯರ್ಥಿಗಳು (ಬಿಜೆಪಿ-6, ಜೆಡಿಎಸ್‌-4) ಸ್ಥಾನಗಳಲ್ಲಿ ಗೆಲುವು ಪಡೆದಿದ್ದಾರೆ. ಇನ್ನು ಕಾಂಗ್ರೆಸ್‌ 6 ಸ್ಥಾನ ಹಾಗೂ ಒಂದು ಸ್ಥಾನ ಪಕ್ಷೇತರ ಪಾಲಾಗಿದೆ.