ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Kolar Car accident: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ; ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ!

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಮರಗಲ್ ಸಮೀಪ ಭೀಕರ ಅಪಘಾತ ನಡೆದಿದೆ. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಹೊಡೆದು ಪಲ್ಟಿಯಾಗಿದೆ. ಇದರಿಂದ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ (Bengaluru-Chennai Expressway) ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಮರಗಲ್ ಸಮೀಪ ನಡೆದಿದೆ.

ಕಾರು ಪಲ್ಟಿಯಾದ ಹಿನ್ನೆಲೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರು ಪುಣೆ ಮೂಲದ ಪ್ರಯಾಣಿಕರು ಎಂದು ತಿಳಿದು ಬಂದಿದ್ದು, ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಬಂಗಾರಪೇಟೆ ಹಾಗೂ ಕೋಲಾರ ಆಸ್ಪತ್ರೆಗೆ ರವಾನಿಸಲಾಗಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾವೇರಿಯಲ್ಲಿ ಸಾರಿಗೆ ಬಸ್-ಲಾರಿ ಡಿಕ್ಕಿ; ಒಬ್ಬರು ಸಾವು, ಆರು ಮಂದಿಗೆ ಗಾಯ

ಹಾವೇರಿ: ತಾಲೂಕಿನ ಹೊಸರಿತ್ತಿ ಗ್ರಾಮದ ಕಡೆಗೆ ತೆರಳುತ್ತಿದ್ದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ (Haveri accident) ಬುಧವಾರ ಮಧ್ಯಾಹ್ನ ನಡೆದಿದೆ.

ಸಾರಿಗೆ ಬಸ್ ಹೊಸರಿತ್ತಿ ಗ್ರಾಮದ ಕಡೆಗೆ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಏಕಾಏಕಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಓರ್ವ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳಲ್ಲಿ ಕೆಲವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಂತಿದ್ದ ಟ್ರಕ್‌ಗೆ ಕಾರ್‌ ಡಿಕ್ಕಿ: ಜಾರ್ಖಂಡ್ ಸಚಿವೆ ದೀಪಿಕಾ ಪಾಂಡೆ ಸಿಂಗ್ ಪುತ್ರಿ ಸೇರಿ ನಾಲ್ವರು ದುರ್ಮರಣ

ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.