ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Girls Missing Case: ಮುಳಬಾಗಿಲಿನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ!

Kolar News: ನಾಪತ್ತೆಯಾಗಿದ್ದ ಬಾಲಕಿಯರು ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿಯಿರುವ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಡಿರಬಹುದು ಅಥವಾ ಬಾಲಕಿಯರು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿಯಲ್ಲಿ ನಾಪತ್ತೆಯಾಗಿದ್ದ (Girls Missing Case) ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆ ಮುಂದೆ ಆಟವಾಡಲು ಹೋಗಿದ್ದ ವೇಳೆ ಬಾಲಕಿಯರು ನಾಪತ್ತೆಯಾಗಿದ್ದರು. ಈ ಕುರಿತು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ, ಇದೀಗ ಬಾಲಕಿಯರು ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ಬಾಲಕಿಯರನ್ನು ಧನ್ಯಾಬಾಯಿ (13), ಚೈತ್ರಾಬಾಯಿ (13) ಎಂದು ಗುರುತಿಸಲಾಗಿದೆ. ಗುರುವಾರ ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಏಕಾಏಕಿ ನಾಪತ್ತೆಯಾಗಿದ್ದರು. ಈ ಕುರಿತು ಬಾಲಕಿಯರ ಕುಟುಂಬಸ್ಥರು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ನಾಪತ್ತೆಯಾಗಿದ್ದ ಬಾಲಕಿಯರು ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿಯಿರುವ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಡಿರಬಹುದು ಅಥವಾ ಬಾಲಕಿಯರು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಿದ್ದು, ಸಾವಿಗೆ ನಿಖರ ಕಾರಣ ಏನು ಎಂಬುದು ಪೋಲಿಸ್ ತನಿಖೆಯಿಂದಲೇ ತಿಳಿಯಬೇಕಿದೆ.

ಈ ಸುದ್ದಿಯನ್ನೂ ಓದಿ |TJS George: ಸರಕಾರಿ ಗೌರವಗಳೊಂದಿಗೆ ಟಿಜೆಎಸ್‌ ಜಾರ್ಜ್‌ ಅಂತ್ಯಕ್ರಿಯೆ: ಆದೇಶ

ಬೆಂಗಳೂರಿನಲ್ಲಿ ಅರ್ಧ ಕಟ್ಟಿದ ಕಟ್ಟಡದಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ

ಬೆಂಗಳೂರು: ಬೆಂಗಳೂರಿನ (Bengaluru) ಕೊತ್ತನೂರು ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ (Skeleton found) ಪತ್ತೆಯಾಗಿದೆ. ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ ಮೆಂಟ್‌ನಲ್ಲಿ ಅಸ್ಥಿಪಂಜರ ಕಂಡುಬಂದಿದೆ. ಸುಮಾರು 6ರಿಂದ 8 ತಿಂಗಳ ಹಿಂದೆ ಮೃತಪಟ್ಟಿರಬಹುದಾದ ವ್ಯಕ್ತಿಯ ಅಸ್ಥಿಪಂಜರವಿದು ಎನ್ನಲಾಗಿದೆ. ನಿನ್ನೆ ಸಂಜೆ ಕಟ್ಟಡ ಕಾರ್ಮಿಕರ ಕಣ್ಣಿಗೆ ಅಸ್ಥಿಪಂಜರ ಬಿದ್ದಿದೆ.

ನಿನ್ನೆ ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಗಾರ್ಡ್ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೊತ್ತನೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಸ್ಥಿಪಂಜರವನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದ್ದಾರೆ. ಮೇಲ್ನೋಟಕ್ಕೆ 35ರಿಂದ 40 ವರ್ಷದ ಪುರುಷನ ಅಸ್ಥಿಪಂಜರ ಎಂದು ಶಂಕಿಸಲಾಗಿದೆ. ದೊಡ್ಡಗುಬ್ಬಿಯ ಶ್ರೀಧರ್ ಎಂಬವರಿಗೆ ಸೇರಿದ ಅಪಾರ್ಟ್‌ಮೆಂಟ್‌ನಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ. ವ್ಯಕ್ತಿಯ ಸಾವಿನ ಕಾರಣ ಎಫ್‌ಎಸ್‌ಎಲ್‌ ವರದಿಯ ಬಳಿಕ ಗೊತ್ತಾಗಲಿದೆ.

ಮಗಳನ್ನು ಕೊಚ್ಚಿ ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಶಿವಮೊಗ್ಗ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಪುತ್ರಿಯನ್ನು ಮಚ್ಚಿನಿಂದ ಕೊಲೆ (Murder case) ಮಾಡಿ ತಾಯಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Self harming) ಮಾಡಿಕೊಂಡಿದ್ದಳೆ. ಘಟನೆ ಶಿವಮೊಗ್ಗದಲ್ಲಿ (Shivamogga news) ನಡೆದಿದೆ. ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದಾಗ ಈ ಮಹಿಳೆಯ ಪತಿ ಡ್ಯೂಟಿಗೆ ತೆರಳಿದ್ದರು.

ಇದನ್ನೂ ಓದಿ: Death Penalty: ಬಾಲಕಿ ಮೇಲೆ ಅತ್ಯಾಚಾರ; ಕೊಲೆ ಆರೋಪಿಗೆ ಮರಣ ದಂಡನೆ

36 ವರ್ಷದ ಶ್ರುತಿ ಕೃತ್ಯ ಎಸಗಿದಾಕೆ. ಪುತ್ರಿ ಪೂರ್ವಿಕಳನ್ನು (11) ಮಚ್ಚಿನಿಂದ ಕೊಚ್ಚಿ ಕೊಂದ ಬಳಿಕ ಶ್ರುತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗದ ಶರಾವತಿ ನಗರದಲ್ಲಿ ಜಿಲ್ಲಾ ಆಸ್ಪತ್ರೆ ಕ್ವಾರ್ಟರ್ಸ್‌ನಲ್ಲಿ ಈ ಘಟನೆ ನಡೆದಿದ್ದು, ಪತಿ ರಾಮಣ್ಣ ಕೆಲಸಕ್ಕೆ ತೆರಳಿದ್ದಾಗ ಪುತ್ರಿಯನ್ನು ಕೊಂದು ಶ್ರುತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡ್ಯೂಟಿ ಮುಗಿಸಿ ರಾಮಣ್ಣ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಶ್ರುತಿ ಮಾನಸಿಕ ಅಸ್ವಸ್ಥಳಾಗಿ ಕೃತ್ಯ ಎಸಗಿದ್ದಾಳೆ ಎಂದು ತರ್ಕಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.