Kolar News: ಮಾಜಿ ಸ್ಪೀಕರ್ ರಮೇಶ್ ಕುಮಾರ್ ತೋಟದಲ್ಲಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು
Kolar News: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ದುರಂತ ನಡೆದಿದೆ. ತೋಟದಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಗೌನಿಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಕೋಲಾರ: ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿರುವ ಘಟನೆ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರ ತೋಟದಲ್ಲಿ ನಡೆದಿದೆ. ಕೋಲಾರ ಜಿಲ್ಲೆ (Kolar News) ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ಈ ದುರಂತ ನಡೆದಿದೆ. ಮೃತ ಮಹಿಳೆಯನ್ನು ಮಂಗಮ್ಮ ಎಂದು ಗುರುತಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಗೌನಿಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾಲ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ಕಿರಾತಕ!
ಬೆಂಗಳೂರು: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ವಿವೇಕ್ ನಗರದಲ್ಲಿ ನಡೆದಿದೆ. ಜು.1 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಬ್ರಮಣಿ ಬೆಂಕಿ ಹಚ್ಚಿದ ಆರೋಪಿ. ಈತನ ಸಹೋದರಿ ತನ್ನ ಮಗಳ ಮದುವೆಗಾಗಿ, ವೆಂಕಟರಮಣಿ ಎಂಬುವವರ ಬಳಿ 5 ಲಕ್ಷ ರೂ. ಹಣ ಪಡೆದಿದ್ದಳು. ಹಲವು ವರ್ಷಗಳಾದರೂ ಸಾಲ ವಾಪಸ್ ನೀಡಿರಲಿಲ್ಲ. ಇದರಿಂದ ವೆಂಕಟರಮಣಿ ಹಣ ವಾಪಸ್ ಕೊಡುವಂತೆ ಕೇಳಿದ್ದರು.
ಹಣ ವಾಪಸ್ ಕೇಳಿದ್ದಕ್ಕೆ ಪಾರ್ವತಿ ಹಾಗೂ ಆಕೆಯ ಮಗಳು ವೆಂಕಟರಮಣಿಯವರ ಬಳಿ ಗಲಾಟೆ ಮಾಡಿದ್ದಾರೆ. ಇನ್ನು ಇದೇ ವಿಚಾರಕ್ಕೆ ಸಿಟ್ಟಾದ ಆರೋಪಿ, ವೆಂಕಟರಮಣಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸಂಬಂಧ ವೆಂಕಟರಮಣಿ ಪುತ್ರ ವಿವೇಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಪ್ರತಿಭಟನೆಗಾಗಿ ಬೆಂಗಳೂರಿಗೆ ಬಂದಿದ್ದ ರೈತ ಹೃದಯಾಘಾತದಿಂದ ಸಾವು
ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಭೂಸ್ವಾಧೀನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ. ಆದರೆ, ಈ ಹೋರಾಟಕ್ಕೆ ಬರುತ್ತಿದ್ದ ರೈತ ಮುಖಂಡರೊಬ್ಬರು ಹೃದಯಾಘಾತದಿಂದ (Heart attack) ನಿಧನರಾಗಿರುವುದು ಕಂಡುಬಂದಿದೆ. ಗುಂಡ್ಲುಪೇಟೆಯ ಕುರಬರಹುಂಡಿ ಮೂಲದ ಈಶ್ವರಪ್ಪ ಮೃತರು. ಇವರು ರೈಲಿನಲ್ಲಿ ಬೆಂಗಳೂರಿಗೆ ಬಂದಿದ್ದರು. ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಹೊರಗೆ ಬಂದಾಗ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ರಾಜ್ಯದ ಹಲವು ರೈತಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಜೂನ್ 27ರಿಂದಲೂ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ನಡೆಯುತ್ತಿದೆ. ಇಂದು ರಾಷ್ಟ್ರೀಯ ಮಟ್ಟದ ರೈತ ಮುಖಂಡರು ಭಾಗಿಯಾಗುತ್ತಿದ್ದಾರೆ.