ಕೊಪ್ಪಳ: ಕೊಪ್ಪಳಕ್ಕೆ ಹೊಂದಿಕೊಂಡಿರುವ 1 ಸಾವಿರ ಎಕರೆ ಭೂಮಿಯಲ್ಲಿ ಬಲ್ದೋಟ ಕಂಪನಿ ಕಬ್ಬಿಣ ಉತ್ಪಾದನೆ ಕಾರ್ಖಾನೆ ವಿಸ್ತರಣೆಗೆ ಮುಂದಾಗಿದ್ದು, ಈ ಕುರಿತು ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. (Koppal News) ಕೊಪ್ಪಳದ ಸುಪ್ರಸಿದ್ಧ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಕಾರ್ಖಾನೆ ವಿರೋಧಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೋರಾಟದ ನೇತೃತ್ವ ವಹಿಸಿಕೊಳ್ಳಬೇಕು ಎಂದು ಕಾರ್ಖಾನೆ ವಿರೋಧಿ ಹೋರಾಟಗಾರರ ನಿಯೋಗವು ಬುಧವಾರ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮನವಿ ಮಾಡಿತು. ಈ ವೇಳೆ ಶ್ರೀಗಳು, ಸಾಮೂಹಿಕ ನೇತೃತ್ವದಲ್ಲಿ ಹೋರಾಟ ಮಾಡೋಣ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | KSRTC News: ಎಸ್‌ಎಸ್‌ಎಲ್‌ಸಿ- ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ಕೆಎಸ್‌ಆರ್‌ಟಿಸಿ ಪ್ರಯಾಣ ಉಚಿತ
ಕೊಪ್ಪಳದಲ್ಲಿ ಒಂದಡೆ ಕಾರ್ಖಾನೆ ಆರಂಭಕ್ಕೆ ಸಿದ್ದತೆ ನಡೆದರೆ, ಇನ್ನೊಂದೆಡೆ ಕೊಪ್ಪಳದಲ್ಲಿ ಕಾರ್ಖಾನೆ ಸ್ಥಾಪನೆಗೆ ವಿರೋಧಿ ಹೋರಾಟ ತೀರ್ವ ಸ್ವರೂಪ ಪಡೆಯುತ್ತಿದೆ. ಕಾರ್ಖಾನೆ ಸ್ಥಾಪನೆಗೆ ವಿರೋಧಿಸಿ ಈಗಾಗಲೇ ಪೆಬ್ರವರಿ 24 ಕ್ಕೆ ಕೊಪ್ಪಳ ಬಂದ್ ಕರೆ ನೀಡಲಾಗಿದೆ.