ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Koppal News: ಕೊಪ್ಪಳದಲ್ಲಿ ಮಗುವಿಗೆ ಜನ್ಮ ನೀಡಿದ 10 ತರಗತಿ ವಿದ್ಯಾರ್ಥಿನಿ; ಪೋಕ್ಸೊ ಕೇಸ್‌ ದಾಖಲು

ಕೊಪ್ಪಳದ ಕುಕನೂರು ತಾಲೂಕಿನಲ್ಲಿ ಘಟನೆ ನಡೆದಿದೆ. ಬಾಲಕಿಯ ಈ ಸ್ಥಿತಿಗೆ ಕಾರಣವಾದ ಆರೋಪಿ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಘಟನೆಯಿಂದಾಗಿ ವಸತಿನಿಲಯದಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಪೋಷಕರಲ್ಲಿ ಆತಂಕ ಉಂಟಾಗಿವೆ.

ಸಾಂದರ್ಭಿಕ ಚಿತ್ರ

ಕೊಪ್ಪಳ, ನ.26: 10ನೇ ತರಗತಿಯ ಬಾಲಕಿಯೊಬ್ಬಳು ವಸತಿ ನಿಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಕೊಪ್ಪಳದ (Koppal News) ಕುಕನೂರು ತಾಲೂಕಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಕುಕನೂರು ಪೋಲಿಸರು ಬಂಧಿಸಿ, ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಕನೂರು ತಾಲೂಕಿನ ಹಾಸ್ಟೆಲ್‌ನ ವಿದ್ಯಾರ್ಥಿನಿ ದಿಢೀರ್ ಹೊಟ್ಟೆನೋವಿನಿಂದ ನರಳಾಡಿದ್ದಾಳೆ. ತಕ್ಷಣ ಆಕೆಯನ್ನು ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆ ಅಪ್ರಾಪ್ತ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಅಪ್ರಾಪ್ತ ವಯಸ್ಸಿನ ಬಾಲಕಿಯು ಮಗುವಿಗೆ ಜನ್ಮ ನೀಡಿದ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಡಿಸಿ ಸುರೇಶ್ ಇಟ್ನಾಳ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಅವರು ತಕ್ಷಣವೇ ಆಸ್ಪತ್ರೆಗೆ ದೌಡಾಯಿಸಿ, ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಕುಕನೂರು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ, ಬಾಲಕಿಯ ಈ ಸ್ಥಿತಿಗೆ ಕಾರಣನಾದ ಯುವಕನನ್ನು ಬಂಧಿಸಿದ್ದಾರೆ.

ಆರೋಪಿ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ಈ ಘಟನೆಯಿಂದಾಗಿ ವಸತಿನಿಲಯದಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಪೋಷಕರಲ್ಲಿ ಆತಂಕ ಉಂಟಾಗಿವೆ.

ಮುರುಘಾ ಶ್ರೀ ವಿರುದ್ಧ ಇದ್ದ ಕೇಸ್‌ ಏನು?; ಇಲ್ಲಿದೆ ಸಂಪೂರ್ಣ ವಿವರ

ಹಾಸ್ಟೆಲ್ ವಾರ್ಡನ್ ವಿರುದ್ಧ ಪೋಷಕರ ಆಕ್ರೋಶ

ಬಾಲಕಿ 9 ತಿಂಗಳು ಗರ್ಭಿಣಿಯಾಗಿದ್ದರೂ ಅಲ್ಲಿನ ವಾರ್ಡನ್ ಅಥವಾ ಸಿಬ್ಬಂದಿಯ ಗಮನಕ್ಕೆ ಬಾರದೇ ಹೋಗಿದ್ದು ಹೇಗೆ ಎಂದು ಪಾಲಕರು ಮತ್ತು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ವಸತಿನಿಲಯದ ಸಿಬ್ಬಂದಿಗೆ ಈ ವಿಷಯ ಗೊತ್ತಿದ್ದೂ ಕಣ್ಮುಚ್ಚಿ ಕುಳಿತಿದ್ದರೇ ಎಂಬ ಅನುಮಾನಗಳುಂಟಾಗಿವೆ. ಹಾಸ್ಟೆಲ್‌ನಲ್ಲಿಯೇ ಇಂತಹ ಘಟನೆ ನಡೆದರೆ, ಪೋಷಕರು ಯಾರನ್ನು ನಂಬಿ ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಬೇಕು? ಇದು ಬದಲಾಗಿ ನಿರ್ಲಕ್ಷ್ಯದ ಪರಮಾವಧಿ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗೆ ಬೆಂಕಿ; 17 ಜನ ಅರೆಸ್ಟ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ಪ್ರತಿಭಟನೆ ವೇಳೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿ 17 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿಡಿಯೋ ಸಾಕ್ಷ್ಯ ಆಧರಿಸಿ ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದ್ದು, ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಘಟನೆಯ ವಿಡಿಯೋ ಆಧರಿಸಿ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವ ಆರೋಪಿ ಯಾವ ಕೃತ್ಯ ನಡೆಸಿದ್ದಾನೆಂದು ವಿಡಿಯೋ ಸಾಕ್ಷ್ಯ ಕಲೆಹಾಕಿದ ಬಳಿಕವೇ ಅರೆಸ್ಟ್​​ ಮಾಡಲಾಗಿದೆ. ರೈತರ ಕಡೆ ನಿಂತು 13 ಜನ ಕಲ್ಲು ತೂರಿದ್ದರೆ, ಇನ್ನೊಂದೆಡೆ ಕಾರ್ಖಾನೆ ಕಡೆಯಿಂದ ಕಲ್ಲು ತೂರಾಟ ನಡೆಸಿರುವ 4 ಜನರು ಸೇರಿ ಒಟ್ಟು 17 ಮಂದಿಯನ್ನು ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ.

ಪೋಕ್ಸೊ ಪ್ರಕರಣ; ಡಿ.2ಕ್ಕೆ ವಿಚಾರಣೆಗೆ ಯಡಿಯೂರಪ್ಪಗೆ ಕೋರ್ಟ್‌ ಸಮನ್ಸ್‌

ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿರುವ ಬಾಗಲಕೋಟೆ ಎಸ್​​ಪಿ ಸಿದ್ದಾರ್ಥ್​​ ಗೋಯೆಲ್​, ಇದು ರೈತರ ಕೃತ್ಯ ಅಲ್ಲ. ಬಂಧಿತ ಕಿಡಿಗೇಡಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ಬೆಂಕಿ ಹಚ್ಚಿದ್ದು ಮತ್ತು ಕಲ್ಲು ತೂರಿದ್ದು ತಾವೇ ಎಂದು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿ ಕೆಲವೊಂದಿಷ್ಟು ಜನರಿಗೆ ನೊಟೀಸ್ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.