ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shivasharanappa Gouda Patil: ಯಲಬುರ್ಗಾ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ ನಿಧನ

ಶಿವಶರಣಪ್ಪಗೌಡ ಪಾಟೀಲ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡು ಸಲ ಪರಾಭವಗೊಂಡಿದ್ದರು. ನಂತರ 1999ರಿಂದ 2004ರ ವರೆಗೆ ಶಾಸಕರಾಗಿದ್ದರು. ಕೊಪ್ಪಳ ಜಿಲ್ಲೆಯಲ್ಲಿ ಜನಪ್ರಿಯ ಶಾಸಕರಾಗಿದ್ದ ಇವರು, ರೈತರ ಸಮಸ್ಯೆಗಳಿಗೆ ಧ್ವನಿಯಾಗಿದ್ದಲ್ಲದೆ, ಮೂಲ ಸೌಕರ್ಯಗಳ ಅಭಿವೃದ್ಧಿಗೂ ವಿಶೇಷ ಗಮನ ನೀಡಿದ್ದರು.

ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ (ಸಂಗ್ರಹ ಚಿತ್ರ)

ಕೊಪ್ಪಳ, ನ.26: ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ (82) (Shivasharanappa Gouda Patil) ಅವರ ಅನಾರೋಗ್ಯದಿಂದ ಬುಧವಾರ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಜಿಪಂ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ್ ಸೇರಿ ನಾಲ್ವರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಯಲಬುರ್ಗಾ ಪಟ್ಟಣದ ಅವರ ನಿವಾಸದಲ್ಲಿ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಬೆಳಗ್ಗೆ 9ರ ತನಕ ಪಾರ್ಥಿವ ಶರೀರದ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಸ್ವಗ್ರಾಮ ಹುಣಸಿಹಾಳ ಗ್ರಾಮದಲ್ಲಿ ಗುರುವಾರ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಶಿವಶರಣಗೌಡ ಪಾಟೀಲ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡು ಸಲ ಪರಾಭವಗೊಂಡಿದ್ದರು. ನಂತರ 1999ರಿಂದ 2004ರ ವರೆಗೆ ಶಾಸಕರಾಗಿದ್ದರು. ಇದಕ್ಕೂ ಮೊದಲು ಅವರು ತಾಲೂಕು ಬೋರ್ಡ್ ಅಧ್ಯಕ್ಷರಾಗಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಕಾರು ಅಪಘಾತ; ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

ಕೊಪ್ಪಳ ಜಿಲ್ಲೆಯಲ್ಲಿ ಜನಪ್ರಿಯ ಶಾಸಕರಾಗಿದ್ದ ಇವರು, ರೈತರ ಸಮಸ್ಯೆಗಳಿಗೆ ಧ್ವನಿಯಾಗಿದ್ದಲ್ಲದೆ, ಮೂಲ ಸೌಕರ್ಯಗಳ ಅಭಿವೃದ್ಧಿಗೂ ವಿಶೇಷ ಗಮನ ನೀಡಿದ್ದರು. ಇಂತಹ ನಾಯಕ ಶಿವಶರಣಪ್ಪಗೌಡ ಅವರ ನಿಧನಕ್ಕೆ ವಿವಿಧ ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.