Karnataka Weather: ಇಂದಿನ ಹವಾಮಾನ; ಬೆಂಗಳೂರು, ತುಮಕೂರು ಸೇರಿ ಹಲವೆಡೆ ಹಗುರ ಮಳೆ
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆ ಇದೆ.
Prabhakara R
December 25, 2024
ಬೆಂಗಳೂರು: ಡಿ. 25ರಂದು ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣ ಹವೆ ಇರುವ ಸಾಧ್ಯತೆಯಿದೆ. ಇನ್ನು ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.
ಇನ್ನು ಡಿ.26ರಂದು ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಗದಗ, ಬಾಗಲಕೋಟೆ, ಕೊಪ್ಪಳ,ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಹೊರತುಪಡಿಸಿ, ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆಯಿದೆ.
ಡಿ. 27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಹೊರತುಪಡಿಸಿ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಡಿ.28, 29 ಹಾಗೂ 30 ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.
ತಾಪಮಾನದ ಮುನ್ಸೂಚನೆಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 °C ಜಾಸ್ತಿ ಇರುತ್ತದೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಸಾಮಾನ್ಯಕ್ಕಿಂತ 1-3 ° C ನಷ್ಟು ಕಡಿಮೆ ಇರುತ್ತದೆ ಮತ್ತು ನಂತರ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಕರಾವಳಿ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.
ಡಿ.26ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 °C ಮತ್ತು 19 °C ಇರುವ ಸಾಧ್ಯತೆ ಇದೆ.