ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Koppal Accident: ಕೊಪ್ಪಳದಲ್ಲಿ ಭೀಕರ ಅಪಘಾತ; ಓಮ್ನಿ ಕಾರಿಗೆ ಲಾರಿ ಡಿಕ್ಕಿ, ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ರಸ್ತೆ ಅಪಘಾತ ನಡೆದಿದೆ. ಸರಕು ತುಂಬಿದ ಲಾರಿ ರಸ್ತೆ ವಿಭಜಕ ದಾಟಿ ಓಮಿನಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

ಕೊಪ್ಪಳದಲ್ಲಿ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವುದು.

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶನಿವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ (Koppal Accident) ನಡೆದಿದ್ದು, ಐವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ ಗ್ರಾಮದ ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ (25), ರಮೇಶ್ ಬಳ್ಳಾರಿ (45), ಚಿನ್ಮಯ (16) ಹಾಗೂ ಪ್ರವೀಣ ಶಿವಾಜಿ ಬಾಳೆಕಾಯಿ ಮೃತರು.

ಪ್ರವೀಣ ಹಾಗೂ ಕೆಂಚಮ್ಮ ಬಾಳೆಕಾಯಿ ಗಂಡ ಹೆಂಡತಿಯಾಗಿದ್ದು, ಇವರ ಮಗ ಚಿನ್ಮಯ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಸಮರ್ಥ ಯಾದವ್ ಪರಿಸ್ಥಿತಿ ಗಂಭೀರವಾಗಿದ್ದು ಬಳ್ಳಾರಿಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇವರು ಓಮಿನಿ ವಾಹನದಲ್ಲಿ ಸ್ವಗ್ರಾಮದಿಂದ ಮಂತ್ರಾಲಯಕ್ಕೆ ಕೊಪ್ಪಳ ಮಾರ್ಗವಾಗಿ ತೆರಳುತ್ತಿದ್ದಾಗ ಭಾನಾಪುರ ಬಳಿ ಅಪಘಾತ ನಡೆದಿದೆ. ಸರಕು ತುಂಬಿದ ಲಾರಿ ರಸ್ತೆ ವಿಭಜಕ ದಾಟಿ ಓಮಿನಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ಮೃತದೇಹಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಆಂಬ್ಯುಲೆನ್ಸ್‌ ಸಿಬ್ಬಂದಿಯ ನೆರವಿನಿಂದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಯಲಬುರ್ಗಾ ವೃತ್ತದ ಸಿಪಿಐ ಮೌನೇಶ್ವರ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮೊಹರಂ ಅಲಾಯಿ ಕುಣಿಯ ಬೆಂಕಿಯಲ್ಲಿ ಬಿದ್ದು ಯುವಕ ಸಾವು

ಬಳ್ಳಾರಿ: ಮೊಹರಂ ಅಲಾಯಿ ಕುಣಿಯ ಬೆಂಕಿಯಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮುಂಜಾನೆ ಮೃತಪಟ್ಟಿದ್ದಾನೆ. ಜಿಲ್ಲೆಯ ಕುರುಗೋಡು ತಾಲೂಕಿನ ಕ್ಯಾದಿಗೆಹಾಳು ಗ್ರಾಮದಲ್ಲಿ ಕೆಂಡ ಹಾಯುವಾಗ ಆಕಸ್ಮಿಕವಾಗಿ ಯುವಕ ಕಾಲು ಜಾರಿ ಅಗ್ನಿ ಕುಂಡಕ್ಕೆ ಬಿದ್ದಿದ್ದ. ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ

ಕ್ಯಾದಿಗೆಹಾಳು ಗ್ರಾಮದ ನಿವಾಸಿ ದೇವೇಂದ್ರ (28) ಮೃತಪಟ್ಟ ದುರ್ದೈವಿ. ಗ್ರಾಮದ ಮಸೀದಿಯ ಮುಂಭಾಗದಲ್ಲಿ ಸಾಂಪ್ರದಾಯಿಕವಾಗಿ ಆಯೋಜಿಸಲಾಗಿದ್ದ ಅಲಾಯಿ ಕುಣಿಯ ಬೆಂಕಿಯಲ್ಲಿ ನಡೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ. ದೇವೇಂದ್ರ ಬೆಂಕಿಯ ಮೇಲೆ ನಡೆಯುತ್ತಿದ್ದಾಗ ಹಠಾತ್ತನೆ ಕಾಲು ಜಾರಿ ಬೆಂಕಿ ಕುಂಡಕ್ಕೆ ಬಿದ್ದಿದ್ದ. ಇದರಿಂದಾಗಿ ತೀವ್ರವಾಗಿ ಸುಟ್ಟ ಗಾಯಗಳಾಗಿದ್ದರು.

ಅನುಕಂಪದ ಸರ್ಕಾರಿ ಉದ್ಯೋಗ ಪಡೆಯಲು ನೀಚ ಕೆಲಸ; ಸುಪಾರಿ ಕೊಟ್ಟು ಅಪ್ಪನನ್ನೇ ಕೊಲ್ಲಿಸಿದ ಪಾಪಿ ಪುತ್ರ

ಘಟನೆ ನಡೆದ ತಕ್ಷಣ ಯುವಕನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ನಂತರ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಯುವಕ ಕೊನೆಯುಸಿರೆಳೆದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.