Koppala news: ಪ್ರಿ ವೆಡ್ಡಿಂಗ್ ಫೋಟೋಶೂಟ್ ಮುಗಿಸಿ ಬರುತ್ತಿದ್ದ ಜೋಡಿ ಅಪಘಾತದಲ್ಲಿ ಸಾವು
Road Accident: ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ.21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ ಕಡೆ ತೆರಳಿ ಮರಳುತ್ತಿದ್ದರು.
ಕೊಪ್ಪಳದಲ್ಲಿ ರಸ್ತೆ ಅಪಘಾತ -
ಗಂಗಾವತಿ, ಡಿ.08 : ಕೊಪ್ಪಳದಲ್ಲಿ (koppala news) ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಇನ್ನೆರಡು ವಾರದಲ್ಲಿ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಜೋಡಿಯೊಂದು ಪ್ರಿ ವೆಡ್ಡಿಂಗ್ ಫೋಟೋಶೂಟಿಂಗ್‌ಗೆ (Pre wedding photoshoot) ಹೋಗಿ ಬರುವಾಗ ರಸ್ತೆ ಅಪಘಾತದಲ್ಲಿ (Road Accident) ಮೃತಪಟ್ಟಿದೆ. ಈ ದುರ್ಘಟನೆ ಭಾನುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಬಳಿ ನಡೆದಿದೆ. ಕವಿತಾ ಹಾಗೂ ಕರಿಯಪ್ಪ ಮೃತ ದುರ್ದೈವಿಗಳು.
ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ.21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ ಕಡೆ ತೆರಳಿ ಮರಳುತ್ತಿದ್ದರು.
ಕವಿತಾರನ್ನು ತಮ್ಮ ಗಂಗಾವತಿಯ ಮನೆಗೆ ಬಿಟ್ಟು ಹೋಗಲು ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಕ್ವಾರಿಯ ಲಾರಿಯೊಂದು ಬೈಕ್ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಕರಿಯಪ್ಪ ತೀವ್ರವಾಗಿ ಗಾಯಗೊಂಡು ಗಂಗಾವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದಾರೆ.
ಜಮಖಂಡಿಯಲ್ಲಿ ಭೀಕರ ರಸ್ತೆ ಅಪಘಾತ; ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವು
ಕಾರು ಪಲ್ಟಿಯಾಗಿ ಮೂವರ ಸಾವು
ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ಭೀಕರ ಕಾರು ಅಪಘಾತ (Mandya Car Accident) ನಡೆದಿದ್ದು, ಮೂವರು ದುರ್ಮರಣ ಹೊಂದಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಪಲ್ಟಿಹೊಡೆದಿಂದ ದುರಂತ ಸಂಭವಿಸಿದೆ. ಚಿಕ್ಕಮಗಳೂರು ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳು.
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ತಿರುವಿನಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.